ಬಾಗಲಕೋಟೆ:ಬಾಗಲ ಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಉಮೇಶ ಮೇಟಿ ಭರ್ಜರಿ ಗೆಲುವು ಸಾಧಿಸಿದ್ದಾರೆ. 21,866 ಮತಗಳ ಅಂತರದ ಗೆಲುವು ದಾಖಲಿಸಿದ್ದಾರೆ. ಶಾಸಕ ದಿ. ಎಚ್.ವೈ. ಮೇಟಿ ಅವರ ಅಗಲಿಕೆಯಿಂದ ತೆರವಾಗಿದ್ದ ಸ್ಥಾನಕ್ಕೆ ನಡೆದ ಉಪಚುನಾವಣೆ ಕಾಂಗ್ರೆಸ್ ಹಾಗೂ
ಬಿಜೆಪಿ ಪಾಲಿಗೆ ಪ್ರತಿಷ್ಠೆಯ ಕಣವಾಗಿತ್ತು. ಕೊನೆಗೆ ಮತದಾರ ಕಾಂಗ್ರೆಸ್ ಪರವಾಗಿ ಒಲವು ತೋರಿರುವುದರಿಂದ ಉಮೇಶ ಮೇಟಿಗೆ ಭಾರೀ ಅಂತರದ ಗೆಲುವಾಗಿದೆ.
ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ಮುಂದುವರಿದಿದ್ದು, ಕಾಂಗ್ರೆಸ್ ಪಕ್ಷ ಮುನ್ನಡೆ ಸಾಧಿಸಿದೆ. ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು ಮುನ್ನಡೆಯಲ್ಲಿದ್ದಾರೆ.
16ನೇ ಸುತ್ತು ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು 7,516 ಮತಗಳ ಮುನ್ನಡೆ ಸಾಧಿಸಿದ್ದಾರೆ.ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು – 52,714 ಬಿಜೆಪಿ ಅಭ್ಯರ್ಥಿ ಶ್ರೀನಿವಾಸ್ ದಾಸಕರಿಯಪ್ಪ – 45,197












