ಬೆಂಗಳೂರು:ರಾಜ್ಯದಲ್ಲಿ ಚಳಿ ಆರಂಭವಾಗಿದ್ದು, ಅಲ್ಲಲ್ಲಿ ಮಳೆಯಾಗುವ ಸಾಧ್ಯತೆಯೂ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಕೆಲವೆಡೆ ಮಳೆಯಾಗುವ ಸಾಧ್ಯತೆ ಇದೆ ಬೆಳಗಾವಿ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಶಿವಮೊಗ್ಗದಲ್ಲೂ ಮಳೆಯಾಗುವ ಸಾಧ್ಯತೆ ಇದೆ ಎಂದು ಸೂಚನೆ ನೀಡಿದೆ. ಸುಳ್ಯದಲ್ಲಿ ಕಳೆದ ಕೆಲವು ದಿನಗಳಿಂದ ಅಲ್ಲಲ್ಲಿ
ಮಳೆಯಾಗಿದೆ. ಗ್ರಾಮೀಣ ಭಾಗದಲ್ಲಿ ಚಳಿಯ ಅನುಭವವೂ ಆಗುತಿದೆ. ಬೆಳಗ್ಗೆ ಮಂಜು ಮುಸುಕಿದ ವಾತಾವರಣವೂ ಕಂಡು ಬಂದಿದೆ. ಸುಳ್ಯ ತಾಲೂಕಿನ ಗ್ರಾಮೀಣ ಪ್ರದೇಶಗಳಲ್ಲಿ ರಾತ್ರಿಯ ವೇಳೆ, ಬೆಳಗ್ಗಿನ ಸಮಯಗಳಲ್ಲಿ ಚಳಿಯ ಅನುಭವ ಆಗುತಿದೆ ಎಂದು ಜನರು ಹೇಳಿಕೊಂಡಿದ್ದಾರೆ. ಸಾಮಾನ್ಯವಾಗಿ ಅಕ್ಟೋಬರ್ ನವೆಂಬರ್ ತಿಂಗಳಲ್ಲಿ ಉತ್ತಮ ಚಳಿ ಕಂಡು ಬರುತ್ತಿದ್ದರೂ ಚಳಿಯ ಅನುಭವ ಆಗಿರಲಿಲ್ಲ. ವಿಪರೀತ ಸೆಕೆಯ ವಾತಾವರಣವೇ ಇತ್ತು. ಇದೀಗ ಸ್ವಲ್ಪ ಚಳಿಯಾಗುತಿದೆ. ರಾತ್ರಿಯ ವೇಳೆ ಮುಂದಿನ ಕೆಲವು ದಿನ
ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಭಾಗದಲ್ಲಿ ಚಳಿಯ ವಾತಾವರಣ ಮುಂದುವರಿಯುವ ಒಂದೆರಡು ಕಡೆಗಳಲ್ಲಿ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರೆಯಲಿದೆ. ರಾಜ್ಯದ ವಿವಿಧ ಭಾಗದಲ್ಲಿ ಚಳಿ ಆವರಿಸುತ್ತಿದೆ. ದಿನೇ ದಿನೇ ವಾತಾವರಣದಲ್ಲಿನ ತಂಪು ಹೆಚ್ಚಾಗುತ್ತಿದೆ. ಕರ್ನಾಟಕದಲ್ಲಿ ಅಲ್ಲಲ್ಲಿ ಹಿಂಗಾರು ಮಳೆ ಚುರುಕುಗೊಳ್ಳುವ ಜೊತೆಗೆ ಚಳಿ ಹೆಚ್ಚಾಗುವ ಮುನ್ಸೂಚನೆ ಇದೆ.










