ಬೆಂಗಳೂರು:ಸಾಹಸ ಸಿಂಹ ವಿಷ್ಣುವರ್ಧನ್ ಮತ್ತು ಹಿರಿಯ ನಟಿ ಸರೋಜಾದೇವಿಗೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ನೀಡಲು ರಾಜ್ಯ ಸಚಿವ ಸಂಪುಟ ನಿರ್ಣಯಿಸಿದೆ. ಕರ್ನಾಟಕ ರತ್ನ ಪ್ರಶಸ್ತಿ ನೀಡುವ ಕುರಿತು
ಗುರುವಾರ ನಡೆದ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಗಲಾಯಿತು.
ಇಂದಿನ ಸಂಪುಟ ಸಭೆಯಲ್ಲಿ ರಾಷ್ಟ್ರಕವಿ ಕುವೆಂಪು ಅವರಿಗೆ ಭಾರತರತ್ನ ನೀಡಬೇಕೆಂದು ಕೇಂದ್ರ ಸರಕಾರವನ್ನು ಒತ್ತಾಯಿಸಲು ನಿರ್ಣಯಿಸಲಾಯಿತು.ನಟ ವಿಷ್ಣುವರ್ಧನ್ ಅವರಿಗೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ನೀಡುವಂತೆ ಹಿರಿಯ ಕಲಾವಿದರ ನಿಯೋಗ ಮುಖ್ಯಮಂತ್ರಿ ಭೇಟಿಯಾಗಿ ಒತ್ತಾಯಿಸಿದ್ದರು.












