ಬೆಂಗಳೂರು: ಒಂದು ವರ್ಷದ ಹಿಂದೆ ಅಗಲಿದ ನಟ ಡಾ.ಪುನೀತ್ ರಾಜಕುಮಾರ್ ಅವರಿಗೆ “ಕರ್ನಾಟಕ ರತ್ನ” ಪ್ರಶಸ್ತಿಯನ್ನು ಮರಣೋತ್ತರವಾಗಿ ನೀಡಲಾಯಿತು. ಪುನೀತ್ ಪರವಾಗಿ ಅವರ ಪತ್ನಿ ಅಶ್ವಿನಿ ಪುನೀತ್ ರಾಜಕುಮಾರ್ ಅವರಿಗೆ
ಪ್ರದಾನ ಮಾಡಲಾಯಿತು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅಶ್ವಿನಿ ಪುನೀತ್ ರಾಜಕುಮಾರ್ ಅವರಿಗೆ”ಕರ್ನಾಟಕ ರತ್ನ” ಪ್ರಶಸ್ತಿ ಪದಕ ಪ್ರದಾನಿಸಿ ಗೌರವಿಸಿದರು. ಈ ಸಂದರ್ಭದಲ್ಲಿ ಇನ್ಫೊಸಿಸ್ ಪ್ರತಿಷ್ಠಾನದ ಅಧ್ಯಕ್ಷೆ ಡಾ.ಸುಧಾಮೂರ್ತಿ, ಹಿರಿಯ ನಟರಾದ ರಜನಿಕಾಂತ್, ಡಾ.ಶಿವರಾಜ್‍ಕುಮಾರ್, ಜೂ.ಎನ್‍ಟಿಆರ್, ರಾಘವೇಂದ್ರ ರಾಜ್‍ಕುಮಾರ್, ಸಚಿವರಾದಆರ್.ಅಶೋಕ್,ವಿ.ಸುನೀಲ್ ಕುಮಾರ್, ಬಿ.ಎ.ಬಸವರಾಜ,ಮುನಿರತ್ನ, ಡಾ.ಕೆ.ಸುಧಾಕರ್, ವಿ.ಸೋಮಣ್ಣ, ಶಾಸಕರಾದ ರಿಝ್ವಾನ್ ಆರ್ಶದ್, ಎನ್.ಎ.ಹಾರೀಸ್ ಸೇರಿದಂತೆ ರಾಜ್‍ಕುಮಾರ್ ಕುಟುಂಬ ಸದಸ್ಯರು ಉಪಸ್ಥಿತರಿದ್ದರು.