ಸುಳ್ಯ:ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ
ಅಡ್ಕಾರು ಬಳಿ ಕೆಎಸ್ಆರ್ಟಿಸಿ ಬಸ್ಗಳ ಮಧ್ಯೆ ಸಂಭವಿಸಿದ ಅಪಘಾತದಲ್ಲಿ ಹಲವು ಮಂದಿ ಪ್ರಯಾಣಿಕರು ಗಾಯಗೊಂಡ ಘಟನೆ ನಡೆದಿದೆ. ಧರ್ಮಸ್ಥಳದಿಂದ ಮೈಸೂರಿಗೆ ಹೋಗುತ್ತಿದ್ದ ಕೆಎಸ್ಆರ್ಟಿಸಿ ಬಸ್ ಹಾಗೂ
ಸುಳ್ಯದಿಂದ ಪುತ್ತೂರಿನ ಕಡೆಗೆ ಹೋಗುತ್ತಿದ್ದ ಕೆಎಸ್ಆರ್ಟಿಸಿ ಬಸ್ ಮಧ್ಯೆ ಅಪಘಾತ ಸಂಭವಿಸಿದೆ ಎಂದು ತಿಳಿದು ಬಂದಿದೆ. ಅಡ್ಕಾರು ಬಸ್ಸು ತಂಗುದಾಣ ಸಮೀಪ ಈ ಅಪಘಾತ ಸಂಭವಿಸಿದೆ. ಸುಮಾರು 20ಕ್ಕೂ ಹೆಚ್ಚು ಮಂದಿ ಪ್ರಯಾಣಿಕರು ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ಸುಳ್ಯ ಸರಕಾರಿ ಆಸ್ಪತ್ರೆಗೆ ಕರೆ ತಂದು ಚಿಕಿತ್ಸೆ ನೀಡಲಾಗಿದೆ.












