ಸುಳ್ಯ:ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಕನ್ನಡ ವಿಷಯದಲ್ಲಿ ಶೇ.100 ಅಂಕ ಪಡೆದ ವಿದ್ಯಾರ್ಥಿಗಳಿಗೆ ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಗೌರವಾರ್ಪಣೆ ಕಾರ್ಯಕ್ರಮ ಕನ್ನಡ ಭವನದಲ್ಲಿ ನಡೆಯಿತು. ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಕೃಷ್ಣಪ್ಪ ಉದ್ಘಾಟಿಸಿದರು. ಎಒಎಲ್ಇ ಅಧ್ಯಕ್ಷ ಡಾ.ಕೆ.ವಿ. ಚಿದಾನಂದ ವಿದ್ಯಾರ್ಥಿಗಳನ್ನು
ಗೌರವಿಸಿದರು. ಕಸಾಪ ಅಧ್ಯಕ್ಷ ಚಂದ್ರಶೇಖರ ಪೇರಾಲು ಅಧ್ಯಕ್ಷತೆ ವಹಿಸಿದ್ದರು. ಎನ್ಎಂಪಿಯು ಪ್ರಾಂಶುಪಾಲೆ ಮಿಥಾಲಿ ಪಿ. ರೈ ಅಭಿನಂದನಾ ಭಾಷಣ ಮಾತನಾಡಿದರು.
ಸುಡಾ ಅಧ್ಯಕ್ಷ ಕೆ.ಎಂ. ಮುಸ್ತಫಾ ಮುಖ್ಯ ಅತಿಥಿಗಳಾಗಿದ್ದರು.
ಶೇ.100ಅಂಕ ಪಡೆದ ಸುಳ್ಯ ತಾಲೂಕಿನ 14 ವಿದ್ಯಾಸಂಸ್ಥೆಗಳ 66 ವಿದ್ಯಾರ್ಥಿಗಳನ್ನು ಕನ್ನಡ ಶಿಕ್ಷಕರನ್ನು ಗೌರವಿಸಲಾಯಿತು.
ಕಸಾಪ ಕೋಶಾಧಿಕಾರಿ ದಯಾನಂದ ಆಳ್ವ, ಕಾರ್ಯದರ್ಶಿಗಳಾದ ತೇಜಸ್ವಿ ಕಡಪಲ, ಚಂದ್ರಮತಿ ಕೆ, ಕಾರ್ಯಕ್ರಮ ಸಂಯೋಜಕಿ ಲತಾಶ್ರೀ ಸುಪ್ರೀತ್ ಮೋಂಟಡ್ಕ, ಸುಳ್ಯ ಹೋಬಳಿ ಘಟಕದ ಅಧ್ಯಕ್ಷೆ ಚಂದ್ರಾವತಿ ಬಡ್ಡಡ್ಕ, ಪಂಜ ಹೋಬಳಿ ಘಟಕದ ಅಧ್ಯಕ್ಷ ಬಾಬು ಗೌಡ ಅಚ್ರಪ್ಪಾಡಿ ಉಪಸ್ಥಿತರಿದ್ದರು.ಕೆ ಆರ್ ಗೋಪಾಲಕೃಷ್ಣ ಆಶಯ ಗೀತೆ ಹಾಡಿದರು. ರಮೇಶ್ ನೀರಬಿದಿರೆ ವಂದಿಸಿದರು. ಲತಾಶ್ರೀ ಸುಪ್ರೀತ್ ಮೋಂಟಡ್ಕ ಕಾರ್ಯಕ್ರಮ ನಿರೂಪಿಸಿದರು.