ಸುಳ್ಯ: ಕಸಾಪ ಸಾಹಿತ್ಯ ಸಂಭ್ರಮದ ಅಂಗವಾಗಿ ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್, ಸುಳ್ಯನೆಹರೂ ಮೆಮೋರಿಯಲ್ ಕಾಲೇಜು, ಕಾಲೇಜಿನ ಕನ್ನಡ ಸಂಘ ಹಾಗೂ ಕನ್ನಡ ವಿಭಾಗದ ವತಿಯಿಂದ ಕನ್ನಡ ನುಡಿ ಹಬ್ಬ ಸಂಭ್ರಮ ಕಾರ್ಯಕ್ರಮವು ಕಾಲೇಜಿನಲ್ಲಿ ನಡೆಯಿತು.ಕಾರ್ಯಕ್ರಮದ
ಅಧ್ಯಕ್ಷತೆಯನ್ನು ಕಾಲೇಜಿನ ಆಡಳಿತಾಧಿಕಾರಿ, ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಚಂದ್ರಶೇಖರ ಪೇರಾಲು, ವಹಿಸಿದ್ದರು. ಲೇಖಕಿ ವಿಮಲಾರುಣ ಪಡ್ಡಂಬೈಲು ಉಪನ್ಯಾಸ ನೀಡಿದರು. ಕಾಲೇಜಿನ ಪ್ರಾಂಶುಪಾಲ ಡಾ.ರುದ್ರಕುಮಾರ್ ಎಂ.ಎಂ. , ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ಮಿತಾಲಿ ರೈ, ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಶ್ರೀಧರ್ ವಿ, ಕಾಲೇಜಿನ ಐಕ್ಯೂಎಸಿ ಸಂಯೋಜಕಿ ಡಾ.ಮಮತಾ ಕೆ, ಕನ್ನಡ ವಿಭಾಗದ

ಮುಖ್ಯಸ್ಥೆ, ಡಾ ಅನುರಾಧಾ ಕುರುಂಜಿ, ಕನ್ನಡ ಸಾಹಿತ್ಯ ಪರಿಷತ್ತಿನ ಪ್ರಧಾನ ಕಾರ್ಯದರ್ಶಿಗಳಾದ ತೇಜಸ್ವಿ ಕಡಪಳ, ಚಂದ್ರಮತಿ ಕೆ ಹಾಗೂ ಖಜಾಂಚಿ ದಯಾನಂದ ಅಳ್ವ, ಬಾಲಚಂದ್ರ ಗೌಡ ಮೊದಲಾದವರು ಉಪಸ್ಥಿತರಿದ್ದರು.ಇದೇ ಸಂದರ್ಭದಲ್ಲಿ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥೆ ಡಾ.ಅನುರಾಧಾ ಕುರುಂಜಿ ಅವರನ್ನು ಕನ್ನಡ ಸಾಹಿತ್ಯ ಪರಿಷತ್, ಸುಳ್ಯ, ಇದರ ವತಿಯಿಂದ ಸನ್ಮಾನಿಸಲಾಯಿತು. ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ವಿಜೇತ ಚಂದ್ರಶೇಖರ ಪೇರಾಲು ಅವರನ್ನು ಕಾಲೇಜು ವತಿಯಿಂದ ಸನ್ಮಾನಿಸಲಾಯಿತು.ಕಾರ್ಯಕ್ರಮದ ಅಂಗವಾಗಿ

ಕನ್ನಡ ಭಾಷೆ, ಸಾಹಿತ್ಯ, ಸಂಸ್ಕೃತಿ ಹಾಗೂ ಕನ್ನಡಾಭಿಮಾನವನ್ನು ಬಿಂಬಿಸುವ ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು.ಕಾರ್ಯಕ್ರಮ ಸಂಯೋಜಕರಾದ ರಾಮಚಂದ್ರ ಪಲ್ಲತ್ತಡ್ಕ ಸ್ವಾಗತಿಸಿ, ಶಶ್ಮಿ ಭಟ್ ಸನ್ಮಾನಿತರನ್ನು ಪರಿಚಯಿಸಿದರು. ಕೇಶವ ಸಿ ಎ ವಂದಿಸಿ ಚಂದ್ರಾವತಿ ಬಡ್ಡಡ್ಕ ನಿರೂಪಿಸಿದರು.ವಿದ್ಯಾರ್ಥಿಗಳಿಂದ ಕನ್ನಡ ನಾಡು, ನುಡಿ, ಸಂಸ್ಕೃತಿ ಹಾಗೂ ಪರಂಪರೆಯನ್ನು ಬಿಂಬಿಸುವ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.











