ಸುಳ್ಯ:ಕನ್ನಡ ರಾಜ್ಯೋತ್ಸವ ಪ್ರಯುಕ್ತ ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ 7 ದಿನಗಳ ಕಾಲ ನಡೆಯುವ ಸಾಹಿತ್ಯ ಸಂಭ್ರಮ ಕಾರ್ಯಕ್ರಮ ನ.1 ರಂದು ಉದ್ಘಾಟನೆಗೊಂಡಿತು.
ಹೆಸರಾಯಿತು ಕರ್ನಾಟಕ- ಉಸಿರಾಗಲಿ ಕನ್ನಡ ಸಂಭ್ರಮಾಚರಣೆ ಹಾಗೂ ಕನ್ನಡ ರಾಜ್ಯೋತ್ಸವ ಪ್ರಯುಕ್ತ ನಡೆಯುವ ಸಾಹಿತ್ಯ ಸಂಭ್ರಮದ
ಉದ್ಘಾಟನೆ ಸರಕಾರಿ ಪ್ರೌಢಶಾಲೆ ಅಜ್ಜಾವರದಲ್ಲಿ ನಡೆಯಿತು.
ಅಜ್ಜಾವರ ಸ.ಪ್ರೌಢಶಾಲೆ, ಪ್ರತಾಪ ಯುವಕ ಮಂಡಲ, ಚೈತ್ರ ಯುವತಿ ಮಂಡಲ ಇದರ ಸಹಯೋಗದಲ್ಲಿ ನಡೆದ ಕಾರ್ಯಕ್ರಮವನ್ನು ಅಜ್ಜಾವರ ಮಹಿಷಮರ್ದಿನಿ ದೇವಸ್ಥಾನದ ಧರ್ಮದರ್ಶಿ ಭಾಸ್ಕರ ರಾವ್ ಬಯಂಬು ಉದ್ಘಾಟಿಸಿದರು. ದ.ರಾ. ಬೇಂದ್ರೆ ನೆನಪು ಹಾಗೂ ಗಾಯನವನ್ನು ಭಾವನಾ ಸುಗಮ ಸಂಗೀತ ಬಳಗದ ಅಧ್ಯಕ್ಷ ಕೆ.ಆರ್. ಗೋಪಾಲಕೃಷ್ಣ ಮಾಡಿದರು. ಅಧ್ಯಕ್ಷತೆಯನ್ನು ಕ.ಸಾ.ಪ. ಸುಳ್ಯ ಘಟಕದ ಅಧ್ಯಕ್ಷ ಚಂದ್ರಶೇಖರ ಪೇರಾಲು ವಹಿಸಿದ್ದರು.
ಬಹುಮಾನ ವಿತರಣೆಯನ್ನು ಶಾಲಾ ಎಸ್ಡಿಎಂಸಿ ಅಧ್ಯಕ್ಷ ಜಯರಾಮ ಬಿ.ಎಸ್. ನೆರವೇರಿಸಿದರು. ಶಾಲಾ ಮುಖ್ಯ ಶಿಕ್ಷಕ ಗೋಪಿನಾಥ್ ಮೆತ್ತಡ್ಕ, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಚನಿಯ ಕಲ್ತಡ್ಕ, ಪ್ರತಾಪ ಯುವಕ ಮಂಡಲದ ಅಧ್ಯಕ್ಷ ಗುರುರಾಜ್ ಅಜ್ಜಾವರ, ಚೈತ್ರ ಯುವತಿ ಮಂಡಲದ ಅಧ್ಯಕ್ಷೆ ಶಶ್ಮಿ ಭಟ್, ಕಸಾಪ ಜಿಲ್ಲಾ ಪ್ರತಿನಿಧಿ ರಾಮಚಂದ್ರ ಪಲ್ಲತ್ತಡ್ಕ, ಕಸಾಪ ಗೌರವ ಕಾರ್ಯದರ್ಶಿ ತೇಜಸ್ವಿ ಕಡಪಳ, ಕೋಶಾಧಿಕಾರಿ ದಯಾನಂದ ಆಳ್ವ ಉಪಸ್ಥಿತರಿದ್ದರು. ಕಾರ್ಯಕ್ರಮದ ಸಲುವಾಗಿ ನಡೆದ ಸ್ಪರ್ಧಾ ಕಾರ್ಯಕ್ರಮಗಳ ವಿಜೇತರಿಗೆ ಬಹುಮಾನ ವಿತರಿಸಲಾಯಿತು
ಮುಖ್ಯ ಶಿಕ್ಷಕ ಗೋಪಿನಾಥ ಮೆತ್ತಡ್ಕ ಸ್ವಾಗತಿಸಿ, ಕಸಾಪ ನಿರ್ದೇಶಕಿ ಸಾವಿತ್ರಿ ಕಣೆಮರಡ್ಕ ವಂದಿಸಿದರು. ಶಿಕ್ಷಕಿ ವಿದ್ಯಾಶಂಕರಿ ಕಾರ್ಯಕ್ರಮ ನಿರೂಪಿಸಿದರು.
ಸಮಾರಂಭಕ್ಕೆ ಮುನ್ನ ಅಜ್ಜಾವರ ಗ್ರಾಮ ಪಂಚಾಯತ್ ಕಚೇರಿಯಿಂದ ಪ್ರೌಢಶಾಲೆಯವರೆಗೆ ನಡೆದ ಕನ್ನಡ ಭುವನೇಶ್ವರಿ ಮೆರವಣಿಗೆ ಕನ್ನಡದ ಓಟವನ್ನು ಗ್ರಾ.ಪಂ. ಅಧ್ಯಕ್ಷೆ ಬೇಬಿ ಕಲ್ತಡ್ಕ ಉದ್ಘಾಟಿಸಿದರು. ಗ್ರಾ.ಪಂ. ಸದಸ್ಯೆ ಲೀಲಾ ಮನಮೋಹನ್ ಧ್ವಜಾರೋಹಣ ನೆರವೇರಿಸಿದರು.