ಸುಳ್ಯ:ಏಳು ದಿನಗಳ ಕಾಲ ಕಾಸಾಪ ವತಿಯಿಂದ ನಡೆದ
ಸಾಹಿತ್ಯ ಸಂಭ್ರಮದ ಮೂಲಕ ಸಾಹಿತ್ಯ ಲೋಕಕ್ಕೆ ಕನ್ನಡ ಭಾಷೆ, ಸಂಸ್ಕೃತಿಯ ಜಾಗೃತಿಯ ಕುರಿತ ದೊಡ್ಡ ಸಂದೇಶ ನೀಡಿದೆ ಎಂದು ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಸದಾನಂದ ಮಾವಜಿ ಹೇಳಿದ್ದಾರೆ.ಕನ್ನಡ ಸಾಹಿತ್ಯ ಪರಿಷತ್ತಿನ ಸುಳ್ಯ ತಾಲೂಕು ಘಟಕದ ಆಶ್ರಯದಲ್ಲಿ
ಸುಳ್ಯ, ಪಂಜ ಹೋಬಳಿ ಘಟಕ, ಶಾಲಾ ಕಾಲೇಜು ಹಾಗೂ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಕನ್ನಡ ರಾಜ್ಯೋತ್ಸವ ಪ್ರಯುಕ್ತ ನಡೆದ ಸಾಹಿತ್ಯ ಸಂಭ್ರಮ ಸಾಪ್ತಾಹಿಕ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಅವರು ಮಾತನಾಡಿದರು. 10 ವರ್ಷಗಳಿಂದ ಪ್ರತಿ ವರ್ಷ 7 ದಿನ ಸಾಹಿತ್ಯ ಸಂಭ್ರಮ ನಡೆಸಿರುವುದು ಶ್ರೇಷ್ಠ ಕಾರ್ಯ ಎಂದು ಅವರು ಶ್ಲಾಘಿಸಿದರು. ಸಮಾರಂಭದ

ಅಧ್ಯಕ್ಷತೆ ವಹಿಸಿದ್ದ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಚಂದ್ರಶೇಖರ ಪೇರಾಲು ಮಾತನಾಡಿ10 ವರ್ಷದಲ್ಲಿ 80ಕ್ಕೂ ಅಧಿಕ ಶಾಲೆಗಳಲ್ಲಿ ಸಾಹಿತ್ಯ ಕಾರ್ಯಕ್ರಮಗಳನ್ನು 6-7 ಸಾವಿರ ವಿದ್ಯಾರ್ಥಿಗಳನ್ನು ತಲುಪಲು ಸಾಧ್ಯವಾಗಿದೆ ಎಂದು ಹೇಳಿದರು.ಕೆವಿಜಿ ಆಯುರ್ವೇದ ಕಾಲೇಜಿನ

ಪ್ರಾಂಶುಪಾಲ ಡಾ.ಡಿ.ವಿ.ಲೀಲಾಧರ, ಸರಕಾರಿ ಪದವಿ ಪೂರ್ವ ಕಾಲೇಜಿನ ಉಪ ಪ್ರಾಂಶುಪಾಲ ಪ್ರಕಾಶ್ ಮೂಡಿತ್ತಾಯ, ರಂಗಮಯೂರಿ ಕಲಾ ಶಾಲೆಯ ನಿರ್ದೇಶಕ ಲೋಕೇಶ್ ಊರುಬೈಲು, ನೃತ್ಯ ಪಟು ಅಭಿಷೇಕ್ ಕಣೆಮರಡ್ಕ ಅವರನ್ನು ಸಮಾರಂಭದಲ್ಲಿ ಸನ್ಮಾನಿಸಲಾಯಿತು. ಮುಖ್ಯ ಅತಿಥಿಯಾಗಿದ್ದ ಎಒಎಲ್ಇ ಕಾರ್ಯದರ್ಶಿ ಕೆ.ವಿ. ಹೇಮನಾಥ ಸನ್ಮಾನ ನೆರವೇರಿಸಿದರು.
ದ.ಕ.ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ವಿಜೇತರಾದ ಚಂದ್ರಶೇಖರ ಪೇರಾಲು ಹಾಗು ಉಷಾ ಚಂದ್ರಶೇಖರ ದಂಪತಿಗಳನ್ನು ಕಸಾಪ ವತಿಯಿಂದ ಗೌರವಿಸಲಾಯಿತು.ಕಸಾಪ ಪಂಜ ಹೋಬಳಿ ಅಧ್ಯಕ್ಷ ಬಾಬು ಗೌಡ ಅಚ್ರಪ್ಪಾಡಿ, ಸುಳ್ಯ ಹೋಬಳಿ ಅಧ್ಯಕ್ಷೆ ಚಂದ್ರಾವತಿ ಬಡ್ಡಡ್ಕ, ಕಸಾಪ ಕೋಶಾಧಿಕಾರಿ ದಯಾನಂದ ಆಳ್ವ,ಕಸಾಪ

ಜಿಲ್ಲಾ ಪ್ರತಿನಿಧಿ ರಾಮಚಂದ್ರ ಪಲ್ಲತ್ತಡ್ಕ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಉಷಾ ಚಂದ್ರಶೇಖರ ಪೇರಾಲು ಸ್ವಾಗತಿಸಿದರು,ಲತಾಶ್ರೀ ಸುಪ್ರೀತ್ ಮೋಂಟಡ್ಕ, ಕೇಶವ ಮಾಸ್ತರ್ ಸಿಎ ಸನ್ಮಾನಿತರ ಪರಿಚಯ ಮಾಡಿದರು. ತೇಜಸ್ವಿ ಕಡಪಳ ವಂದಿಸಿದರು. ಚಂದ್ರಮತಿ ಕೆ. ಕಾರ್ಯಕ್ರಮ ನಿರೂಪಿಸಿದರು.ಗಾಯಕ ಕೆ.ಆರ್.ಗೋಪಾಲಕೃಷ್ಣ ಅವರು ಕನ್ನಡ ಗೀತೆಗಳನ್ನು ಹಾಡಿದರು.
































