ಸುಳ್ಯ: ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಆಶ್ರಯದಲ್ಲಿ ಶಿಕ್ಷಕರ ದಿನಾಚರಣೆಯ ಅಂಗವಾಗಿ ಗುರುಗಳೆಡೆ ನಮ್ಮ ನಡೆ ಕಾರ್ಯಕ್ರಮದಲ್ಲಿ ತಾಲೂಕಿನ ಹಿರಿಯ ಶಿಕ್ಷಕ-ಸಾಹಿತಿಗಳಾದ ಸುಬ್ರಾಯ ಚೊಕ್ಕಾಡಿ ಹಾಗೂ ಲಕ್ಷ್ಮೀಶ ಚೊಕ್ಕಾಡಿಯವರನ್ನು ಅವರ ನಿವಾಸಕ್ಕೆ ತೆರಳಿ ಗೌರವಿಸಲಾಯಿತು. ಚೊಕ್ಕಾಡಿಯಲ್ಲಿ ಇಂದು
ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.
ಕವಿ-ಸಾಹಿತಿ-ಶಿಕ್ಫಕರಾದ ಸುಬ್ರಾಯ ಚೊಕ್ಕಾಡಿ ಹಾಗೂ ಲಕ್ಷ್ಮೀಶ ಚೊಕ್ಕಾಡಿಯವರನ್ನು ಅವರ ನಿವಾಸದಲ್ಲಿ ಮನೆಯವರ ಸಮ್ಮುಖದಲ್ಲಿ ಗೌರವಿಸಲಾಯಿತು. ಸುಬ್ರಾಯ ಚೊಕ್ಕಾಡಿಯವರು ಶಿಕ್ಷಕ ವೃತ್ತಿ ಯಿಂದ ನಿವೃತ್ತರಾಗಿ 25 ವರ್ಷಗಳಾಗಿದ್ದು 85ರ ಹರೆಯದಲ್ಲಿ ಇಂದಿಗೂ ಸಾಹಿತ್ಯ ಕಾಯಕ ಮುಂದುವರಿಸುತ್ತಿದ್ದಾರೆ.ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ ಹಾಗೂ ದ.ಕ.ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆ ವಹಿಸಿದ್ದರು.
10 ವರ್ಷಗಳ ಹಿಂದೆ ಶಿಕ್ಷಕ ವೃತ್ತಿಯಿಂದ ವಿರಮಿಸಿರುವ ಲಕ್ಷ್ಮೀಶ ಚೊಕ್ಕಾಡಿಯವರು ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆಯನ್ನು ಕೂಡ ವಹಿಸಿದ್ದರು.ತಮ್ಮ ಪಾಠದ ಮೂಲಕ ಸಹಸ್ರಾರು ವಿದ್ಯಾರ್ಥಿಗಳಿಗೆ ಸಾಹಿತ್ಯದ ಅಭಿರುಚಿ ವಿಸ್ತರಿಸಿದ ಲಕ್ಷ್ಮೀಶ ಚೊಕ್ಕಾಡಿಯವರ ಸಾಹಿತ್ಯ ಕೃಷಿ ನಿರಂತರವಾಗಿದೆ.
ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಚಂದ್ರಶೇಖರ ಪೇರಾಲು ಎಲ್ಲರನ್ನು ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು.ಪರಿಷತ್ತಿನ ಕಾರ್ಯಕಾರಿ ಸಮಿತಿ ಸದಸ್ಯರಾದ
ಪ್ರೊ.ಸಂಜೀವ ಕುದ್ಪಾಜೆ ಅಭಿನಂದನಾ ನುಡಿಗಳನ್ನಾಡಿದರು.
ಸಾಹಿತ್ಯ ಪರಿಷತ್ತಿನ ಪದಾಧಿಕಾರಿಗಳಾದ ಕೇಶವ.ಸಿ.ಎ,ತೇಜಸ್ವಿ ಕಡಪಳ,
ಲತಾಶ್ರೀ ಸುಪ್ರೀತ್ ಮೋಂಟಡ್ಕ,ಜಿಲ್ಲಾ ಸಾಹಿತ್ಯ ಪರಿಷತ್ತಿನ ಸದಸ್ಯರಾದ ರಾಮಚಂದ್ರ ಪಲ್ಲತಡ್ಕ ಉಪಸ್ಥಿತರಿದ್ದರು.