ಸುಳ್ಯ:ಕನ್ನಡ ಸಾಹಿತ್ಯ ಪರಿಷತ್ತು ಸುಳ್ಯ ತಾಲೂಕು ವತಿಯಿಂದ ಮೈಸೂರು ಮೆಡಿಕಲ್ ಕಾಲೇಜಿನಿಂದ ವಿಶಿಷ್ಟ ಸೇವಾ ಪ್ರಶಸ್ತಿ ಪಡೆದ ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಷನ್ನ ಅಧ್ಯಕ್ಷಡಾ.ಕೆ.ವಿ.ಚಿದಾನಂದ ಅವರಿಗೆ ಗೌರವಾರ್ಪಣೆ ಮತ್ತು ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಸಾಹಿತಿಗಳ ಭಾವಚಿತ್ರ ಹಸ್ತಾಂತರ ಕಾರ್ಯಕ್ರಮ ಕನ್ನಡ ಭವನದಲ್ಲಿ ನಡೆಯಿತು.
ಸಭೆಯ ಅಧ್ಯಕ್ಷತೆಯನ್ನು
ಜಿಲ್ಲಾ ಕಸಾಪ ಅಧ್ಯಕ್ಷ ಡಾ.ಎಂ.ಪಿ.ಶ್ರೀನಾಥ್ ವಹಿಸಿ, ಡಾ.ಕೆ.ವಿ.ಚಿದಾನಂದರನ್ನು ಸನ್ಮಾನಿಸಿದರು.ಪ್ರಭಾರ ಕ್ಷೇತ್ರ ಶಿಕ್ಷಣಾಧಿಕಾರಿ ಶೀತಲ್ ಯು.ಕೆ.ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಸಾಹಿತಿಗಳ ಭಾವಚಿತ್ರ ಹಸ್ತಾಂತರ ಮಾಡಿದರು.ಸುಳ್ಯ ಲಯನ್ಸ್ ಕ್ಲಬ್ ಅಧ್ಯಕ್ಷ ರಾಮಕೃಷ್ಣ ರೈ, ಗುತ್ತಿಗಾರು ಲಯನ್ಸ್ ಕ್ಲಬ್ ಅಧ್ಯಕ್ಷ ಕುಶಾಲಪ್ಪ ತುಂಬತ್ತಾಜೆ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.
ವೇದಿಕೆಯಲ್ಲಿ ಸುಳ್ಯ ಕಸಾಪ ಅಧ್ಯಕ್ಷ ಚಂದ್ರಶೇಖರ ಪೇರಾಲು, ಕಸಾಪ ಕೇಂದ್ರ ಸಮಿತಿ ಸದಸ್ಯ ಡಾ.ಎಂ.ಕೆ.ಮಾಧವ, ಕಸಾಪ ಸುಳ್ಯ ಹೋಬಳಿ ಘಟಕದ ಅಧ್ಯಕ್ಷೆ ಚಂದ್ರಾವತಿ ಬಡ್ಡಡ್ಕ, ಪಂಜ ಹೋಬಳಿ ಘಟಕದ ಅಧ್ಯಕ್ಷ ಬಾಬು ಗೌಡ ಅಚ್ರಪ್ಪಾಡಿ, ಕಸಾಪ ಗೌರವ ಕಾರ್ಯದರ್ಶಿಗಳಾದ ಚಂದ್ರಮತಿ ಕೆ. ಕೋಶಾಧಿಕಾರಿ ದಯಾನಂದ ಆಳ್ವ ಉಪಸ್ಥಿತರಿದ್ದರು. ಚಂದ್ರಶೇಖರ ಪೇರಾಲು ಸ್ವಾಗತಿಸಿ, ತೇಜಸ್ವಿ ಕಡಪಳ ವಂದಿಸಿದರು.ಕಸಾಪ ನಿರ್ದೇಶಕಿ ಲತಾಶ್ರೀಸುಪ್ರೀತ್ ಮೋಂಟಡ್ಕ ಕಾರ್ಯಕ್ರಮ ನಿರೂಪಿಸಿದರು.