ಸುಳ್ಯ: ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಈ ಬಾರಿಯ ಎಸ್.ಎಸ್.ಎಲ್.ಸಿ.ಪರೀಕ್ಷೆಯಲ್ಲಿ ಶೇ 100 ಅಂಕ ಪಡೆದ ವಿದ್ಯಾರ್ಥಿಗಳಿಗೆ ಗೌರವಾರ್ಪಣೆ ಕಾರ್ಯಕ್ರಮ ಸುಳ್ಯ ಕನ್ನಡ ಭವನದಲ್ಲಿ ನಡೆಯಿತು. ಸುಳ್ಯ ಅಕಾಡೆಮಿ ಆಫ್ ಲಿಬರಲ್ ಎಜುಕೇಶನ್ನ ಅಧ್ಯಕ್ಷ ಡಾ.ಕೆ.ವಿ.ಚಿದಾನಂದ ಕಾರ್ಯವನ್ನು ಉದ್ಘಾಟಿಸಿದರು. 91 ಮಂದಿ
ವಿದ್ಯಾರ್ಥಿಗಳು ಕನ್ನಡದಲ್ಲಿ ಶೇ.100 ಅಂಕ ಪಡೆದ ಸಾಧನೆ ಮಾಡಿರುವುದು ಹೆಮ್ಮೆಯ ಸಂಗತಿ ಎಂದು ಅವರು ಹೇಳಿದರು. ಶೇ.100 ಅಂಕ ಪಡೆದ ವಿದ್ಯಾರ್ಥಿಗಳನ್ನು ಅವರು ಸನ್ಮಾನಿಸಿದರು. ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಸನ್ಮಾನ ಸ್ವೀಕರಿಸಿದರು. ಸುಳ್ಯ ಕ್ಷೇತ್ರ ಸಂಪನ್ಮೂಲ ಕೇಂದ್ರ ಸಮನ್ವಯಾಧಿಕಾರಿ ಯು.ಕೆ.ಶೀತಲ್ ಅಭಿನಂದನಾ ಭಾಷಣ ಮಾಡಿದರು.
ಕ.ಸಾ.ಪ.ಪೂರ್ವಾಧ್ಯಕ್ಷೆ ಮೀನಾಕ್ಷಿ ಗೌಡ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ಕ.ಸಾ.ಪ.ಸುಳ್ಯ ಘಟಕದ ಅಧ್ಯಕ್ಷ ಚಂದ್ರಶೇಖರ ಪೇರಾಲು ಅಧ್ಯಕ್ಷತೆ ವಹಿಸಿದ್ದರು. ಕಸಾಪ ಜಿಲ್ಲಾ ಪ್ರತಿನಿಧಿ ರಾಮಚಂದ್ರ ಪಲ್ಲತಡ್ಕ, ಗೌರವ ಕಾರ್ಯದರ್ಶಿ ಗಳಾದ ತೇಜಸ್ವಿ ಕಡಪಳ, ಚಂದ್ರಮತಿ ಕೆ., ಗೌರವ ಕೋಶಾಧಿಕಾರಿ ದಯಾನಂದ ಆಳ್ವ,ಕಾರ್ಯಕ್ರಮ ಸಂಯೋಜಕ ರಮೇಶ್ ನೀರಬಿದಿರೆ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಕನ್ನಡ ಮಾಧ್ಯಮದಲ್ಲಿ ಪ್ರಥಮ ಮತ್ತು ದ್ವಿತೀಯ ಸ್ಥಾನ ಪಡೆದ ವಿದ್ಯಾರ್ಥಿಗಳು ಹಾಗೂ ಕನ್ನಡ ಶಿಕ್ಷಕರು ಮತ್ತು ಗೌರವ ಕನ್ನಡ ಶಿಕ್ಷಕರನ್ನು ಗೌರವಿಸಲಾಯಿತು.
ಕಾರ್ಯಕ್ರಮದಲ್ಲಿ ಗಾಯಕ ಕೆ.ಆರ್.ಗೋಪಾಲಕೃಷ್ಣ ಆಶಯಗೀತೆ ಹಾಡಿದರು. ಕಾರ್ಯಕ್ರಮ ಸಂಯೋಜಕ ರಮೇಶ್ ನೀರಬಿದಿರೆ ಸ್ವಾಗತಿಸಿದರು. ಗೌರವ ಕಾರ್ಯದರ್ಶಿ ತೇಜಸ್ವ ಕಡಪಳ ಪ್ರಾಸ್ತಾವಿಕವಾಗಿ ಮಾತನಾಡಿದರು. ಕಸಾಪ ನಿರ್ದೆಶಕಿ ಸಾವಿತ್ರಿ ಕಣೆಮರಡ್ಕ ವಂದಿಸಿದರು. ಕಸಾಪ ನಿರ್ದೇಶಕಿ ಲತಾಶ್ರೀ ಸುಪ್ರಿತ್ ಮೋಂಟಡ್ಕ ಕಾರ್ಯಕ್ರಮ ನಿರೂಪಿಸಿದರು.