ಕಾಸರಗೋಡು:ಭಾರಿ ಮಳೆಯ ಮುನ್ನೆಚ್ಚರಿಕೆಯಾಗಿ ಕೇಂದ್ರ ಹವಾಮಾನ ಇಲಾಖೆಯು ಕಾಸರಗೋಡು ಜಿಲ್ಲೆಯಲ್ಲಿ ‘ಆರೆಂಜ್ ಅಲರ್ಟ್’ ಘೋಷಿಸಿರುವ ಹಿನ್ನೆಲೆಯಲ್ಲಿ, ಕಾಸರಗೋಡು ಜಿಲ್ಲೆಯ ಎಲ್ಲಾ ಶಿಕ್ಷಣ ಸಂಸ್ಥೆಗಳಿಗೆ ನಾಳೆ (ಜುಲೈ 31) ಜಿಲ್ಲಾಧಿಕಾರಿ ರಜೆ ಘೋಷಿಸಿದ್ದಾರೆ. ಜಿಲ್ಲೆಯ ಎಲ್ಲಾ
ಅಂಗನವಾಡಿ, ಶಾಲೆಗಳು, ಕಾಲೇಜುಗಳು, ವೃತ್ತಿಪರ ಕಾಲೇಜುಗಳು, ಕೇಂದ್ರೀಯ ವಿದ್ಯಾಲಯಗಳು ಮತ್ತು ಮದ್ರಸಾಗಳು ಸೇರಿದಂತೆ ಎಲ್ಲಾ ಶಿಕ್ಷಣ ಸಂಸ್ಥೆಗಳಿಗೂ ಕಡ್ಡಾಯವಾಗಿ ಅನ್ವಯವಾಗಲಿದೆ.
ಶಿಕ್ಷಣ ಸಂಸ್ಥೆಗಳಿಗೆ ರಜೆ ನೀಡಲಾಗಿದ್ದರೂ, ಈಗಾಗಲೇ ನಿಗದಿಯಾಗಿರುವ ಪರೀಕ್ಷೆಗಳಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ. ಅವುಗಳು ನಿಗದಿತ ಸಮಯದಂತೆಯೇ ಜರುಗಲಿವೆ ಎಂದು ಜಿಲ್ಲಾಡಳಿತ ಸ್ಪಷ್ಟಪಡಿಸಿದೆ.









