ಕಾಸರಗೋಡು: ಕಾಸರಗೋಡು ಜಿಲ್ಲೆಯ ಮದೂರು ಪಂಚಾಯತ್ ವ್ಯಾಪ್ತಿಯ ಕೂಡ್ಲು ವಿನಲ್ಲಿ ಶಿವಕೃಷ್ಣ ಫ್ರೆಂಡ್ಸ್ ಕ್ಲಬ್ ಇದರ ವತಿಯಿಂದ ನಡೆದ ಓಣಂ ಆಚರಣೆ 2023 ಕಾರ್ಯಕ್ರದಲ್ಲಿ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರು ಪಾಲ್ಗೊಂಡರು. ಈ ಕಾರ್ಯಕ್ರಮದಲ್ಲಿ ವಿಶೇಷ
ಸಾಧನೆ ಮಾಡಿದ ಮಕ್ಕಳಿಗೆ ಸ್ಮರಣಿಕೆ ನೀಡಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಶಿವಕೃಷ್ಣ ಫ್ರೆಂಡ್ಸ್ ಕ್ಲಬ್ ಇವರ ಸಹಕಾರದಿಂದ ಬಡ ಕುಟುಂಬಕ್ಕೆ
ಕುಟುಂಬಕ್ಕೆ ನಿರ್ಮಿಸಿದ ಮನೆಯ ಕೀಯನ್ನು ಫಲಾನುಭವಿಗೆ ಹಸ್ತಾಂತರಿ ಸಲಾಯಿತು. ನಂತರ ಫಲಾನುಭವಿಯ ಮನೆಗೆ ಭೇಟಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ರವೀಶ್ ತಂತ್ರಿ ಕುಂಟಾರು, ಕ್ಲಬ್ ಪದಾಧಿಕಾರಿಗಳು, ಸ್ಥಳೀಯರು ಉಪಸ್ಥಿತರಿದ್ದರು.