ಕಾಸರಗೋಡು :ಭಾರೀ ಮಳೆ ಹಿನ್ನೆಲೆಯಲ್ಲಿ ಇಂದು (ಜುಲೈ 4) ಕಾಸರಗೋಡು ಜಿಲ್ಲೆಯಲ್ಲಿ ಶಾಲೆಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಕೆ.ಇಂಪಶೇಖರ್ ಆದೇಶ ಹೊರಡಿಸಿದ್ದಾರೆ. ಜುಲೈ4 ರಂದು ಜಿಲ್ಲೆಯಲ್ಲಿ ಆರೇಂಜ್ ಅಲರ್ಟ್ ಘೋಷಿಸಲಾಗಿದೆ. ಮಂಗಳವಾರ ಭಾರೀ ಮಳೆ ಸಾಧ್ಯತೆ ಇರುವುದರಿಂದ ಎಲ್ಲಾ ಶೈಕ್ಷಣಿಕ ಸಂಸ್ಥೆಗಳಿಗೆ ರಜೆ ಘೋಷಿಸಲಾಗಿದೆ.ಸಿಬಿಎಸ್ಇ, ಐಸಿಎಸ್ ಸಿ ಶಾಲೆಗಳು, ಕೇಂದ್ರೀಯ ವಿದ್ಯಾಲಯಗಳು, ಅಂಗನವಾಡಿಗಳು ಮತ್ತು ಮದರಸಗಳು ಇತ್ಯಾದಿಗಳಿಗೆ ರಜೆ ಘೋಷಿಸಲಾಗಿದ್ದು, ಕಾಲೇಜುಗಳಿಗೆ ರಜೆ ಅನ್ವಯಿಸುವುದಿಲ್ಲ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಗೆ ಇಮೇಲ್ ಮಾಡಿರಿ.