ಕಾಸರಗೋಡು:ವ್ಯಾಪಕವಾಗಿ ಮಳೆಯಾಗುವ ಸಾಧ್ಯತೆ ಇದೆ ಎಂಬ ಹಿನ್ನಲೆಯಲ್ಲಿ ಕಾಸರಗೋಡು ಜಿಲ್ಲೆಯಲ್ಲಿ ಜೂನ್ 6ರಂದು ರೆಡ್ ಅಲರ್ಟ್ ಘೋಷಿಸಲಾಗಿದೆ. ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಶಾಲೆ, ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಅರ್ಜುನ್ ಪಾಂಡ್ಯನ್ ಆದೇಶ ನೀಡಿದ್ದಾರೆ.ಪ್ರೊಫೆಷನಲ್ ಕಾಲೇಜು ಸೇರಿದಂತೆ
ಎಲ್ಲಾ ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಿಸಲಾಗಿದೆ.
ಅಂಗನವಾಡಿ, ಟ್ಯೂಶನ್ ಕೇಂದ್ರ, ಐಸಿಎಸ್ಇ, ಸಿಬಿಸಿಐ ಶಾಲೆಗಳು, ಕೇಂದ್ರೀಯ ವಿದ್ಯಾಲಯ, ಮದ್ರಸಗಳಿಗೂ ರಜೆ ಅನ್ವಯವಾಗಲಿದೆ. ರೆಸಿಡೆನ್ಸಿಯಲ್ ಶಾಲೆಗಳು ಎಂದಿನಂತೆ ಕಾರ್ಯಾಚರಿಸಲಿದೆ. ಪೂರ್ವ ನಿಗಧಿತ ವಿಶ್ವವಿದ್ಯಾನಿಲಯ, ಸಾರ್ವಜನಿಕ ಪರೀಕ್ಷೆಗಳು ನಡೆಯಲಿವೆ ಎಂದು ಪ್ರಕಟನೆ ತಿಳಿಸಿದೆ. ಕೇರಳದ 5 ಜಿಲ್ಲೆಗಳಲ್ಲಿ ಭಾರೀ ಮಳೆಯ ಹಿನ್ನಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ.













