ಗುಂಡ್ಯ:ಕಸ್ತೂರಿ ರಂಗನ್ ವರದಿ ಅನುಷ್ಠಾನದ ವಿರುದ್ಧ
ಮಲೆನಾಡು ಜನ ಹಿತರಕ್ಷಣಾ ವೇದಿಕೆಯ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ಕಡಬ ತಾಲೂಕಿನ ಗುಂಡ್ಯದಲ್ಲಿ ನ.15ರಂದು ನಡೆಯಿತು.
ಸುಳ್ಯ, ಕಡಬ, ಬೆಳ್ತಂಗಡಿ ತಾಲೂಕುಗಳ ಕಸ್ತೂರಿ ರಂಗನ್ ವರದಿ ಬಾದಿತ ಪ್ರದೇಶಗಳ ಕೃಷಿಕರು, ಸಾರ್ವಜನಿಕರು ಭಾಗವಹಿಸಿದ್ದರು.ಪ್ರತಿಭಟನಾ ಸಭೆಯನ್ನು
ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಉದ್ಘಾಟಿಸಿದರು. ಮಲೆನಾಡು ಜನ ಹಿತ ರಕ್ಷಣಾ ವೇದಿಕೆ ಸಂಚಾಲಕ ಕಿಶೋರ್ ಶಿರಾಡಿ ಅಧ್ಯಕ್ಷತೆ ವಹಿಸಿದ್ದರು.
ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ, ಸಕಲೇಶಪುರ ಶಾಸಕ ಸಿಮೆಂಟ್ ಮಂಜು, ಮಾಜಿ ಶಾಸಕ ಸಂಜೀವ ಮಠಂದೂರು, ಧರ್ಮಗುರುಗಳಾದ ಫಾ.ಆದರ್ಶ ಜೋಸೆಫ್, ಫಾ.ಸಿಬಿ, ಜಿಪಂ ಮಾಜಿ ಸದಸ್ಯರಾದ ಕೃಷ್ಣ ಶೆಟ್ಟಿ ಕಡಬ, ಪಿ.ಪಿ. ವರ್ಗೀಸ್, ಸರ್ವೋತ್ತಮ ಗೌಡ, ಆಶಾ ತಿಮ್ಮಪ್ಪ ಗೌಡ, ಹರೀಶ್ ಕಂಜಿಪಿಲಿ, ವೆಂಕಟ್ ದಂಬೆಕೋಡಿ, ಪ್ರಮುಖರಾದ ಎ.ವಿ. ತೀರ್ಥರಾಮ, ವೆಂಕಪ್ಪ ಗೌಡ ಸುಳ್ಯ, ವೆಂಕಟ್ ವಳಲಂಬೆ, ಸುಧೀರ್ ಕುಮಾರ್ ಶೆಟ್ಟಿ, ಮುಹಮ್ಮದ್ ಅಲಿ ಹೊಸಮಠ ಮತ್ತಿತರರು ವೇದಿಕೆಯಲ್ಲಿದ್ದರು.
ಪ್ರತಿಭಟನೆಯ ವೇಳೆ ಮನವಿ ಸ್ವೀಕರಿಸಲು ಪುತ್ತೂರು ಸಹಾಯಕ ಆಯುಕ್ತರು ಆಗಮಿಸಬೇಕೆಂದು ಪಟ್ಟು ಹಿಡಿದ ಪ್ರತಿಭಟನಾಕಾರರು ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ರಸ್ತೆ ತಡೆ ನಡೆಸಿದರು. ಪುತ್ತೂರು ಸಹಾಯಕ ಕಮೀಷನರ್ ಆಗಮಿಸಿ ಮನವಿ ಸ್ವೀಕರಿಸಿದ ಬಳಿಕ ಪ್ರತಿಭಟನೆ ಹಿಂಪಡೆಯಲಾಯಿತು.