ಗುತ್ತಿಗಾರು: ಕರ್ಣಾಟಕ ಸಿರೋ ಮಲಬಾರ್ ಕ್ಯಾಥೋಲಿಕ್ ಅಸೋಸಿಯೇಷನ್ ಬೆಳ್ತಂಗಡಿ, ಸಂಘಟನೆಯು ಮಲೆನಾಡು ಹಿತರಕ್ಷಣಾ ವೇದಿಕೆ ಹಾಗೂ ವಿವಿಧ ಸಂಘಟನೆಗಳ ಒಗ್ಗೂಡಿಕೆಯಿಂದ ಗುಂಡ್ಯದಲ್ಲಿ ನ.15ರಂದು ನಡೆಯಲಿರುವ ಕಸ್ತೂರಿರಂಗನ್ ವರದಿ ವಿರುದ್ಧದ ಹೋರಾಟಕ್ಕೆ ಬೆಂಬಲ ನೀಡಲಾಗುವುದು ಈ ಕಾರ್ಯಕ್ರಮಕ್ಕೆ ನಮ್ಮ ಸಮಾಜದ ಜನರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲಿದ್ದಾರೆ ಎಂದು
ಕೆ ಎಸ್ ಎಂ ಸಿ ಎ ಕೇಂದ್ರ ಸಮಿತಿ ಅಧ್ಯಕ್ಷ ಬಿಟ್ಟಿ ನೆಡುನಿಲಂ ತಿಳಿಸಿದ್ದಾರೆ. ಕಸ್ತೂರಿ ರಂಗನ್ ವರದಿ ಹಾಗೂ ಇನ್ನೂ ಕೆಲವು, ಕೃಷಿಕರಿಗೆ ಹಾನಿ ಆಗುವ ಜ್ವಲಂತ ಸಮಸ್ಯೆಗಳಾದ ಅರಣ್ಯ ಕಂದಾಯ ಗಡಿಗುರುತು, ಕೆಲವು ಸರ್ವೆ ನಂಬರ್ ಗಳ ಸಮಸ್ಯೆ ಇತ್ಯಾದಿ ವಿಚಾರಗಳನ್ನು ಸರಿಪಡಿಸಿ ಅನ್ನದಾತರು ನೆಮ್ಮದಿಯಿಂದ ಬದುಕಲು ಬೇಕಾಗಿ ಹೋರಾಡುವ ಈ ಹೋರಾಟಕ್ಕೆ ನಮ್ಮ ಸಂಪೂರ್ಣ ಬೆಂಬಲ ಸೂಚಿಸುತ್ತಿದ್ದೇವೆ.ಕೆ ಎಸ್ ಎಂ ಸಿ ಎ ಕೇಂದ್ರ ಸಮಿತಿ ಅಧ್ಯಕ್ಷ ಬಿಟ್ಟಿ ನೆಡುನಿಲಂ , ನಿರ್ದೇಶಕ ಫಾ. ಆದರ್ಶ್ ಜೋಸೆಫ್ ಹಾಗೂ ಕೇಂದ್ರ ಸಮಿತಿ ಸದಸ್ಯರು ಈ ಬಗ್ಗೆ ಸಭೆ ಸೇರಿ ನಮ್ಮ ಸಮಾಜದವರ ಸಂಪೂರ್ಣ ಬೆಂಬಲ ನೀಡಲು ನಿರ್ಧರಿಸಲಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದರು.