ಪುತ್ತೂರು: ಮತ್ತೊಮ್ಮೆ ದಕ್ಷಿಣ ಕನ್ನಡ ಜಿಲ್ಲೆ ಕಾಂಗ್ರೆಸಿನ ಭದ್ರಕೋಟೆಯಾಗಿ ಪರಿವರ್ತನೆ ಆಗಲಿದೆ ಎಂದು ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್ ಪೂಜಾರಿ ಹೇಳಿದರು. ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮಂಗಳವಾರ ಕಾವುನಲ್ಲಿ ನಡೆದ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದರು.ಕಾಂಗ್ರೆಸ್ ಪಕ್ಷದ ಸಾಧನೆಗಳನ್ನು ಜನರಿಗೆ ತಿಳಿಸಿ. ಖಂಡಿತಾ ಮತದಾರರು ನಮ್ಮ ಕಡೆ ಒಲವು ತೋರಿಸುತ್ತಾರೆ. ಯಾವುದೇ
ಕಾರಣಕ್ಕೂ ನಾವು ದ್ವೇಷದ ರಾಜಕೀಯ ಮಾಡುವ ಅಗತ್ಯವಿಲ್ಲ ಎಂದರು.
ಶಾಸಕ ಅಶೋಕ್ ಕುಮಾರ್ ರೈ ಮಾತನಾಡಿ, ಐದು ಗ್ಯಾರೆಂಟಿಗಳನ್ನು ರಾಜ್ಯ ಸರಕಾರ ಜಾರಿಗೆ ತಂದಾಗ ಇನ್ನು ಅನುದಾನ ಇಲ್ಲ ಎಂದು ಬಿಜೆಪಿಗರು ಹೇಳಿದರು. ಪುತ್ತೂರು ಕ್ಷೇತ್ರಕ್ಕೆ 1400 ಕೋಟಿ ರೂ. ಅನುದಾನ ಬಂದಿದೆ ಎಂದರು.
ಮಾಜಿ ಸಚಿವ, ಜಿಲ್ಲಾ ಚುನಾವಣಾ ಉಸ್ತುವಾರಿ ಬಿ. ರಮಾನಾಥ ರೈ,
ಚುನಾವಣಾ ಉಸ್ತುವಾರಿ ಕಾವು ಹೇಮನಾಥ ಶೆಟ್ಟಿ ಮಾತನಾಡಿದರು. ಡಿಸಿಸಿ ಅಧ್ಯಕ್ಷ ಹರೀಶ್ ಕುಮಾರ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಂ.ಎಸ್. ಮಹಮ್ಮದ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಎಂ.ಬಿ. ವಿಶ್ವನಾಥ ರೈ, ನೆಟ್ಟಣಿಗೆ ಮುಡ್ನೂರು ಜಿಪಂ ಕ್ಷೇತ್ರದ ಮಹಿಳಾ ಉಸ್ತುವಾರಿ ಅನಿತಾ ಹೇಮನಾಥ ಶೆಟ್ಟಿ, ಮಹಮ್ಮದ್ ಬಡಗನ್ನೂರು, ಅಜೀಜ್ ಬುಶ್ರಾ, ವಿಜಯ್ ಕುಮಾರ್ ಸೊರಕೆ, ಅಮಲ ರಾಮಚಂದ್ರ, ಭಾಸ್ಕರ್ ಕೋಡಿಂಬಾಳ, ಎಂ.ಪಿ. ಅಬೂಬಕ್ಕರ್, ಎ.ಕೆ. ಜಯರಾಮ್ ರೈ, ಪುಡಾ ಅಧ್ಯಕ್ಷ ಭಾಸ್ಕರ್ ಕೋಡಿಂಬಾಳ, ವಲಯ ಕಾಂಗ್ರೆಸ್ ಅಧ್ಯಕ್ಷ ಚಂದ್ರಶೇಖರ್ ಬಲ್ಯಾಯ ಮೊದಲಾದವರು ಉಪಸ್ಥಿತರಿದ್ದರು.