ಸುಳ್ಯ:ಕಾಯರ್ತೋಡಿ ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ ಫೆ.5 ರಂದು ನಡೆಯಿತು.
ಬೆಳಿಗ್ಗಿನಿಂದ ಆರಂಭಗೊಂಡು ರಾತ್ರಿಯ ತನಕ ಶ್ರೀ ಮಹಾವಿಷ್ಣು ದೇವರ ಪ್ರತಿಷ್ಠಾ ವಾರ್ಷಿಕೋತ್ಸವ ಮತ್ತು ಶ್ರೀ ನಾಗಬ್ರಹ್ಮ ಪರಿವಾರ ಸಾನಿಧ್ಯಗಳ ಪ್ರತಿಷ್ಠಾ ವಾರ್ಷಿಕೋತ್ಸವ ಹಾಗೂ ತ್ರಿಕಾಲ ಪೂಜೆ ಜರುಗಿತು.
ಪ್ರತಿಷ್ಠಾ ವಾರ್ಷಿಕೋತ್ಸವದ ಅಂಗವಾಗಿ
ಶ್ರೀ ಮಹಾವಿಷ್ಣುವಿನ ಸನ್ನಿಧಿಯಲ್ಲಿ ಬೆಳಿಗ್ಗಿನಿಂದ ವಿವಿಧ ವೈಧಿಕ ಪೂಜಾ ಕೈಂಕರ್ಯಗಳು ನಡೆಯಿತು. ಶ್ರೀಕ್ಷೇತ್ರದ ಶ್ರೀ ನಾಗಬ್ರಹ್ಮ ಪರಿವಾರ ಸಾನಿಧ್ಯಗಳ ಪ್ರತಿಷ್ಠಾ ವಾರ್ಷಿಕೋತ್ಸವ , ತ್ರಿಕಾಲ ಪೂಜೆ ನಡೆಯಿತು. ಶ್ರೀ ಮಹಾವಿಷ್ಣು ದೇವರಿಗೆ ಮಹಾಪೂಜೆ, ಅನ್ನಸಂತರ್ಪಣೆ ಜರುಗಿತು. ಈ ಸಂದರ್ಭದಲ್ಲಿ ದೇವಸ್ಥಾನದ ಪದಾಧಿಕಾರಿಗಳು ಹಾಗೂ ಭಕ್ತಾದಿಗಳು ಭಾಗವಹಿಸಿದ್ದರು.