ಸುಳ್ಯ:ಸುಳ್ಯ ತಾಲೂಕಿನ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ತ್ರೈಮಾಸಿಕ ಪ್ರಗತಿ ಸಮೀಕ್ಷಾ ಸಭೆ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆಯಿತು. ಶಾಸಕಿ ಭಾಗೀರಥಿ ಮುರುಳ್ಯ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ
ತಾಲೂಕಿನ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳ ಬಗ್ಗೆ ಚರ್ಚೆ, ಪ್ರಗತಿಯ ಬಗ್ಗೆ ನಡೆಯಿತು. ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಶಾಹುಲ್ ಹಮೀದ್ ಕುತ್ತಮೊಟ್ಟೆ, ತಹಶೀಲ್ದಾರ್ ಎಂ.ಮಂಜುಳ, ತಾ.ಪಂ.ಇಒ ರಾಜಣ್ಣ, ಕೆಡಿಪಿಸದಸ್ಯರಾದ ಅಶ್ರಫ್ ಗುಂಡಿ, ಧರ್ಮಪಾಲ ಕೊಯಿಂಗಾಜೆ, ಜಯಪ್ರಕಾಶ್ ನೆಕ್ರಪ್ಪಾಡಿ, ತೀರ್ಥರಾಮ ಜಾಲ್ಸೂರು ವಿವಿಧ ಇಲಾಖೆಯ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.









