ಸುಳ್ಯ:ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಮತ್ತು ಮಹಾತ್ಮಗಾಂಧಿ ಮಲ್ನಾಡು ಆಂಗ್ಲಮಾಧ್ಯಮ ಪ್ರೌಢಶಾಲೆ ಕೊಡಿಯಾಲಬೈಲು ಇವರ ಸಹಯೋಗದಲ್ಲಿ ಕೆಡ್ಡಸ ದಿನಾಚರಣೆ ಕೊಡಿಯಾಲಬೈಲಿನ ಗೌಡ ಸಮುದಾಯ ಭವನದಲ್ಲಿ ನಡೆಯಿತು.
ಅರೆಭಾಷೆ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಜಿ ಅಧ್ಯಕ್ಷತೆಯಲ್ಲಿ ನಡೆದ
ಕಾರ್ಯಕ್ರಮವನ್ನು ವಿಶ್ರಾಂತ ಪ್ರಾಂಶುಪಾಲ ಪ್ರೊ. ಎಂ. ಬಾಲಚಂದ್ರ ಗೌಡ ಉದ್ಘಾಟಿಸಿದರು. ಶ್ರೀ ಶಾರದಾ ಪದವಿಪೂರ್ವ ಕಾಲೇಜಿನ ಉಪನ್ಯಾಸಕಿ ಸ್ವರ್ಣಕಲಾ ಎ.ಎಸ್ ಕೆಡ್ಡಸ ಆಚರಣೆಯ ಬಗ್ಗೆ ಮಾತನಾಡಿದರು.
ಸುಳ್ಯ ಗೌಡರ ಯುವ ಸೇವಾ ಸಂಘದ ಅಧ್ಯಕ್ಷ ಪಿ.ಎಸ್. ಗಂಗಾಧರ್, ಮಹಾತ್ಮಾಗಾಂಧಿ ಮಲ್ನಾಡು ಆಂಗ್ಲಮಾಧ್ಯಮ ಪ್ರೌಢಶಾಲೆಯ ಸಂಚಾಲಕ ದೊಡ್ಡಣ್ಣ ಬರಮೇಲು, ಸುಳ್ಯ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಎನ್ ಪಿ. ಸತೀಶ್, ಅರೆಭಾಷೆ ಅಕಾಡೆಮಿ ಮಾಜಿ ಸದಸ್ಯ ಸುರೇಶ್ ಅಮೈ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದರು. ಎಂ.ಜಿ,ಎಂ.ಶಾಲೆಯ ಮುಖ್ಯಶಿಕ್ಷಕಿ ವಿಜಯಲಕ್ಷ್ಮಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಸಂಧ್ಯಾ ಮಂಡೆಕೋಲು ಪ್ರಾರ್ಥಿಸಿದರು.
ಅಕಾಡೆಮಿ ಸದಸ್ಯ ತೇಜಕುಮಾರ್ ಕುಡೆಕಲ್ಲು ಪ್ರಾಸ್ತಾವಿಕವಾಗಿ ಮಾತನಾಡಿ, ಸ್ವಾಗತಿಸಿದರು. ಕಾರ್ಯಕ್ರಮದ ಸದಸ್ಯ ಸಂಚಾಲಕಿ ಲತಾ ಪ್ರಸಾದ್ ಕುದ್ಪಾಜೆ ವಂದಿಸಿದರು.ವಿನೋದ್ ಮೂಡಗದ್ದೆ ಕಾರ್ಯಕ್ರಮ ನಿರೂಪಿಸಿದರು.




