ಅರಂತೋಡು: ಸುಳ್ಯ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ, ರಾಜ್ಯ ಒಕ್ಕಲಿಗರ ಸಂಘ ಬೆಂಗಳೂರು, ಗೌಡರ ಯುವ ಸೇವಾ ಸಂಘ, ಸುಳ್ಯ, ನೆಹರೂ ಸ್ಮಾರಕ ಪದವಿಪೂರ್ವ ಕಾಲೇಜು ಅರಂತೋಡು ಹಾಗೂ ಅರಂತೋಡು ಗ್ರಾಮ ಗೌಡ ಮತ್ತು ಮಹಿಳಾ ಸಮಿತಿಗಳ ಜಂಟಿ ಆಶ್ರಯದಲ್ಲಿ ನಾಡಪ್ರಭು ಕೆಂಪೇಗೌಡರ 517ನೇ ಜನ್ಮದಿನಾಚರಣೆ ಹಾಗೂ
‘ಕೆಂಪೇಗೌಡ ಪ್ರಶಸ್ತಿ’ ಪ್ರದಾನ ಸಮಾರಂಭ ಅರಂತೋಡಿನ ನೆಹರೂ ಸ್ಮಾರಕ ಪದವಿಪೂರ್ವ ಕಾಲೇಜಿನಲ್ಲಿ ಜರುಗಿತು. ರಾಜ್ಯ ಕಾರ್ಮಿಕರ ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷ ಟಿ. ಎಂ. ಶಹೀದ್ ತೆಕ್ಕಿಲ್ ಉದ್ಘಾಟಿಸಿದರು. ಶಾಸಕಿ ಭಾಗೀರಥಿ ಮುರುಳ್ಯ
ಅಧ್ಯಕ್ಷತೆ ವಹಿಸಿದ್ದರು.ಸುಳ್ಯದ ನಿವೃತ್ತ ಕ್ಷೇತ್ರಾಭಿವೃದ್ಧಿ ಅಧಿಕಾರಿ ಶ್ರೀಮತಿ ಎಂ. ಮೀನಾಕ್ಷಿ ಗೌಡ ಅವರಿಗೆ ‘ಕೆಂಪೇಗೌಡ ಪ್ರಶಸ್ತಿ’ ನೀಡಿ ಗೌರವಿಸಲಾಯಿತು. ನಿವೃತ್ತ ಶಿಕ್ಷಕಿ ಚಂದ್ರಮತಿ ಕೆ. ಉಪನ್ಯಾಸ ನೀಡಿದರು.
ಮುಖ್ಯ ಅತಿಥಿಗಳಾಗಿ ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಸದಾನಂದ ಮಾವಜಿ, ಗ್ಯಾರಂಟಿ ಅನುಷ್ಠಾನ ಸಮಿತಿ ಜಿಲ್ಲಾ ಅಧ್ಯಕ್ಷ ಭರತ್ ಮುಂಡೋಡಿ, ತಾಲೂಕು ಶಾಹುಲ್ ಹಮೀದ್, ಸೂಡ ಅಧ್ಯಕ್ಷ ಕೆ.ಎಂ.ಮುಸ್ತಫಾ, ವಿದ್ಯಾರಶ್ಮಿ ವಿದ್ಯಾಲಯದ ಸಂಚಾಲಕ ಸವಣೂರು ಸೀತರಾಮ ರೈ, ಗೌಡರ ಯುವ ಸೇವಾ ಸಂಘದ ಅಧ್ಯಕ್ಷ ಪಿ. ಎಸ್. ಗಂಗಾಧರ, ತಹಶೀಲ್ದಾರ್ ಮಂಜುಳಾ ಎಂ. ಅರಂತೋಡು ಪದವಿಪೂರ್ವ ಕಾಲೇಜು ಪ್ರಾಂಶುಪಾಲ ರಮೇಶ್, ಪ್ರಮುಖರಾದ ದಿನೇಶ್ ಮಡಪ್ಪಾಡಿ, ಎ. ಸಿ. ವಸಂತ, ಸಂತೋಷ್ ಕುತ್ತಮೊಟ್ಟೆ, ಪ್ರೌಢ ಶಾಲಾ ಮುಖ್ಯೋಪಾಧ್ಯಾಯ ಸೋಮಶೇಖರ ಪಿಂಡಿಮನೆ,ಭಾರತಿ ಉಳುವಾರು, ತೀರ್ಥರಾಮ ಅಡ್ಕಬಳೆ ಮತ್ತಿತರರು ಉಪಸ್ಥಿತರಿದ್ದರು.






