ನವದೆಹಲಿ:ಖ್ಯಾತ ಸಾಹಿತಿ, ಚಿಂತಕ, ಬರಹಗಾರ, ವಾಗ್ಮಿ ಲಕ್ಷ್ಮೀಶ ತೋಳ್ಪಾಡಿ ಅವರಿಗೆ ಪ್ರಸಕ್ತ ಸಾಲಿನ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಘೋಷಣೆಯಾಗಿದೆ.ಲಕ್ಷ್ಮೀಶ ತೋಳ್ಪಾಡಿ ಅವರ ‘ಮಹಾಭಾರತ ಅನುಸಂಧಾನದ ಭಾರತಯಾತ್ರೆ’ ಕೃತಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಬಂದಿದೆ ಎಂದು
ಸಾಹಿತ್ಯ ಅಕಾಡೆಮಿ ಪ್ರಕಟಣೆಯಲ್ಲಿ ತಿಳಿಸಿದೆ. ಲಕ್ಷ್ಮೀಶ ತೋಳ್ಪಾಡಿ ಅವರು ಲೇಖಕ, ಚಿಂತಕ ಮತ್ತು ವಿದ್ವಾಂಸರು. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಬಳಿಯ ಶಾಂತಿಗೋಡು ಗ್ರಾಮದವರು.
ದೇಶದ 24 ಭಾಷೆಗಳಿಗೆ ಪ್ರಶಸ್ತಿ ಪ್ರಕಟವಾಗಿದ್ದು
ಮಲಯಾಳಂ ಭಾಷೆಯಲ್ಲಿ ಖ್ಯಾತ ಬರಹಗಾರ ಇ.ವಿ. ರಾಮಕೃಷ್ಣನ್ ಅವರಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಸಿಕ್ಕಿದೆ. ಮಾತೃಭೂಮಿ ಬುಕ್ಸ್ ಪ್ರಕಟಿಸಿದ ‘ಮಲಯಾಳ ಕಾದಂಬರಿಯ ದೇಶ ಕಾಲಂಞಳ್’ ಕೃತಿಗೆ ಈ ಪ್ರಶಸ್ತಿ ಲಭಿಸಿದೆ.










