ನವದೆಹಲಿ: ಅಸ್ಸಾಂ, ಕೇರಳ ಮತ್ತು ಪುದುಚೇರಿ ವಿಧಾನಸಭಾ ಚುನಾವಣೆಗೆ ಮತದಾನ ಆರಂಭವಾಗಿದೆ.ಇಂದು ಅಸ್ಸಾಂನ 126, ಕೇರಳದ 140 ಕ್ಷೇತ್ರಗಳು ಮತ್ತು ಪುದುಚೇರಿಯ ಎಲ್ಲಾ 30 ಕ್ಷೇತ್ರಗಳಿಗೂ
ಮತದಾನ ನಡೆಯುತ್ತಿದೆ. ಮೇ 4ರಂದು ಮತ ಎಣಿಕೆ ಕಾರ್ಯ ನಡೆಯಲಿದ್ದು, ಫಲಿತಾಂಶ ಪ್ರಕಟವಾಗಲಿದೆ.ಇದೇ ಸಂದರ್ಭದಲ್ಲಿ ಕರ್ನಾಟಕದ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ಕ್ಷೇತ್ರಗಳಿಗೆ ಉಪ ಚುನಾವಣೆ ನಡೆಯುತ್ತಿದೆ. ನಾಗಾಲ್ಯಾಂಡ್ನ ಕೋರಿದಾಂಗ್, ತ್ರಿಪುರಾದ ಧರ್ಮನಗರ ಕ್ಷೇತ್ರದಲ್ಲೂ ಮತದಾನ ಆರಂಭವಾಗಿದೆ.
ಎಲ್ಲಾ ಕ್ಷೇತ್ರಗಳಲ್ಲೂ ಬೆಳಿಗ್ಗೆ 7 ಗಂಟೆಯಿಂದಲೇ ಮತದಾನ ಆರಂಭವಾಗಿದೆ.










