ನವದೆಹಲಿ: ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ನವದೆಹಲಿಯಲ್ಲಿ ಭೇಟಿ ಮಾಡಿದರು. ಸಿಎಂ ಅವರು ಪದ್ಮನಾಭ ಸ್ವಾಮಿಯ ವಿಗ್ರಹವನ್ನು ಪ್ರಧಾನ ಮಂತ್ರಿಗೆ ಕಾಣಿಕೆಯಾಗಿ ನೀಡಿದರು.ಭೇಟಿಯ ವೇಳೆ ಸಿಎಂ ಅವರು
ವಯನಾಡ್ನಲ್ಲಿ ಇತ್ತೀಚೆಗೆ ಸಂಭವಿಸಿದ ಭೂಕುಸಿತದಿಂದ ಸಂತ್ರಸ್ತರಾದ ಜನರಿಗೆ ಪುನರ್ವಸತಿಗಾಗಿ ಕೇಂದ್ರದಿಂದ ನೆರವು ಕೋರಿದ್ದಾರೆ ಎಂದು ವರದಿಗಳು ಹೇಳಿವೆ.
ಆಗಸ್ಟ್ 10ರಂದು ಭೂಕುಸಿತ ಪೀಡಿತ ವಯನಾಡ್ಗೆ ಭೇಟಿ ನೀಡಿದ್ದ ಪ್ರಧಾನಿ ಮೋದಿ ಸಂತ್ರಸ್ತರಿಗೆ ಪರಿಹಾರ, ಪುನರ್ವಸತಿಗೆ ಕೇಂದ್ರ ಸಂಪೂರ್ಣ ಬೆಂಬಲ ನೀಡಲಿದೆ ಎಂದು ಹೇಳಿದ್ದರು.
ವಯನಾಡ್ ಭೂಕುಸಿತದಿಂದಾಗಿ ಸಂತ್ರಸ್ತರಾಗಿರುವ 778 ಕುಟುಂಬಗಳಿಗೆ ತಾತ್ಕಾಲಿಕ ಪುನರ್ವಸತಿ ಕಲ್ಪಿಸುವ ಪ್ರಕ್ರಿಯೆ ಪೂರ್ಣಗೊಂಡಿದೆ ಎಂದು ಕೇರಳ ಸರ್ಕಾರ ಹೇಳಿದೆ.