ತಿರುವನಂತಪುರ: ವಿ.ಡಿ.ಸತೀಶನ್ ಮುಖ್ಯಮಂತ್ರಿಯಾಗಿ ಯುಡಿಎಫ್ ಸರಕಾರ ನಾಳೆ(ಮೇ.18) ಪ್ರಮಾಣ ವಚನ ಸ್ವೀಕರಿಸಿ ಅಧಿಕಾರಕ್ಕೇರಲಿದೆ.ಮುಖ್ಯಮಂತ್ರಿ ವಿ. ಡಿ. ಸತೀಶನ್ ಹಾಗು 20 ಸಚಿವರನ್ನು ಒಳಗೊಂಡ ಪೂರ್ಣ ಪ್ರಮಾಣದ ಸಚಿವ ಸಂಪುಟ ಅಧಿಕಾರಕ್ಕೇರಲಿದೆ. ಮುಖ್ಯಮಂತ್ರಿ ಪದವಿ ಆಕಾಂಕ್ಷಿಯಾಗಿದ್ದ
ಹಿರಿಯ ನಾಯಕ ರಮೇಶ್ ಚೆನ್ನಿತಲ ಗೃಹಖಾತೆ ಸಚಿವರಾಗುವರು. ಕೆಪಿಸಿಸಿ ಅಧ್ಯಕ್ಷ ಸನ್ನಿ ಜೋಸೆಫ್, ಹಿರಿಯ ಮುಖಂಡರಾದ ಕೆ.ಮುರಳೀಧರನ್,ಪಿ.ಸಿ.ವಿಷ್ಣುನಾಥ್ ಮತ್ತಿತರ ಕಾಂಗ್ರೆಸ್ ಮುಖಂಡರು ಹಾಗೂ ಯುಡಿಎಫ್ ಮಿತ್ರ ಪಕ್ಷಗಳ ಮುಖಂಡರುಗಳು ಅಧಿಕಾರ ವಹಿಸಲಿದ್ದಾರೆ.ಪ್ರಮಾವಚನ ಸಮಾರಂಭಕ್ಕೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ, ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ತಮಿಳುಮಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ ಸೇರಿದಂತೆ ಪ್ರಮುಖ ನಾಯಕರು ಭಾಗವಹಿಸುವ ಸಾಧ್ಯತೆ ಇದೆ.














