ತಿರುವನಂತಪುರ: ಕೇರಳದ ಹಲವು ಭಾಗಗಳಲ್ಲಿ ಕೆಲ ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿದೆ. ತಿರುವನಂತಪುರಂ, ಕೋಟ್ಟುಂ ಜಿಲಗಲಗಳ ಕೆಲವೆಡೆ ಶೈಕ್ಷಣಿಕ ಸಂಸ್ಥೆಗಳಿಗೆ ರಜೆ ಘೋಷಿಸಿದೆ. ವಿವಿಧ ಕಡೆ
ಪರಿಹಾರ ಕೇಂದ್ರ ಸ್ಥಾಪಿಸಲಾಗಿದೆ. ತಿರುವನಂತಪುರ, ಕೊಲ್ಲಂ, ಪಟ್ಟಣಂತಿಟ್ಟು, ಅಲಪ್ಪುಳ ಮತ್ತು ಕೊಟ್ಟಾಯಂ ಜಿಲ್ಲೆಗಳ ಕೆಲ ಭಾಗಗಳಲ್ಲಿ ಮಂಗಳವಾರ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.ತಿರುವನಂತಪುರ, ಅಲಪ್ಪುಳ, ಕೊಲ್ಲಂ ಮತ್ತು ಪಟ್ಟಣಂತಿಟ್ಟು ಜಿಲ್ಲೆಗಳಲ್ಲಿ ಯೆಲ್ಲೊ ಅಲರ್ಟ್ ಘೋಷಿಸಲಾಗಿದೆ.
ಕಳೆದ ಮೂರ್ನಾಲ್ಕು ದಿನಗಳಿಂದ ರಾಜ್ಯದ ಹಲವೆಡೆ ನಿರಂತರ ಮಳೆಯಾಗುತ್ತಿದೆ. ಮರಗಳು ಧರೆಗುರುಳಿವೆ, ಗೋಡೆಗಳು ಕುಸಿದಿವೆ. ರಸ್ತೆಗಳು ಜಲಾವೃತಗೊಂಡು ವಾಹನಗಳ ಸಂಚಾರಕ್ಕೆ ಅಡಚಣೆಯುಂಟಾಗಿದೆ ಎಂದು ವರದಿಯಾಗಿದೆ