ತಿರುವನಂತಪುರ: ಮುಂಗಾರು ಮಳೆ ಆರಂಭಕ್ಕೆ ಮುನ್ನವೇ ಭಾರೀ ಮಳೆ ಸುರಿಯುತ್ತಿರುವ ಕೇರಳದಲ್ಲಿ ಮಳೆ ಆರ್ಭಟ ಮುಂದುವರಿದಿದೆ. ತಿರುವನಂತಪುರಂ, ಕೊಲ್ಲಂ, ಪತ್ತನಂತಿಟ್ಟ, ಆಲಪುಯ, ಕೋಟಯಂ, ಇಡುಕ್ಕಿ, ಎರಣಾಕುಳಂ, ಕಾಸರಗೋಡು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು
ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಎಲ್ಲೋ ಅಲರ್ಟ್ ಘೋಷಿಸಲಾಗಿದೆ.
ರಾಜ್ಯದ ಹಲವು ಭಾಗಗಳಲ್ಲಿ 24 ಗಂಟೆಗಳಲ್ಲಿ 20 ಸೆಂ.ಮೀ ಮಳೆಯಾಗಿದ್ದು, ಕೊಚ್ಚಿ, ತ್ರಿಶ್ಶೂರ್ ಸೇರಿದಂತೆ ಪ್ರಮುಖ ನಗರಗಳಲ್ಲಿನ ಹಲವು ಪ್ರದೇಶಗಳು ಶುಕ್ರವಾರ ಜಲಾವೃತವಾಗಿವೆ. ಭಾರಿ ಮಳೆಗೆ ಕೊಚ್ಚಿ ನಗರ ಸೇರಿ ವಿವಿಧ ಪ್ರದೇಶಗಳು ಜಲಾವೃತವಾಗಿದೆ. ರಾಜ್ಯದ ಹಲವೆಡೆ ಮರಗಳು ಧರೆಗುರುಳಿದ್ದು, ಲಘು ಭೂಕುಸಿತ ಸಂಭವಿಸಿದೆ, ರಸ್ತೆಗಳಿಗೆ ಹಾನಿಯಾಗಿದೆ. ಏಳು ನಿರಾಶ್ರಿತರ ಕೇಂದ್ರವನ್ನು ತೆರೆಯಲಾಗಿದ್ದು, 223 ಜನರನ್ನು ಸ್ಥಳಾಂತರಿಸಲಾಗಿದೆ.