ತಿರುವನಂತಪುರ: ಕೇರಳದಾದ್ಯಂತ ನೈರುತ್ಯ ಮುಂಗಾರಿನ ಮಳೆಯ ಅಬ್ಬರ ಮುಂದುವರಿದಿದೆ. ಕಳೆದ ಕೆಲವು ದಿನಗಳಿಂದ ಎಡೆಬಿಡದೆ ಮಳೆ ಸುರಿಯುತ್ತಿದೆ. ಎರ್ನಾಕುಲಂ ಜಿಲ್ಲೆಗೆ ಹವಾಮಾನ ಇಲಾಖೆ
ಆರೆಂಜ್ ಅಲರ್ಟ್ ಘೋಷಿಸಿದೆ.ಪಟ್ಟಣಂತಿಟ್ಟ, ಆಲಪ್ಪುಳ, ಇಡುಕ್ಕಿ, ವಯನಾಡು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಿದೆ. ಹವಾಮಾನ ಇಲಾಖೆ ಮುನ್ಸೂಚನೆ ಹಿನ್ನೆಲೆ ರಾಜ್ಯ ವಿಪತ್ತು ನಿರ್ವಹಣಾ ತಂಡ ಭೂಕುಸಿತ ಸಂಭವಿಸುವ ಗುಡ್ಡಗಾಡು ಪ್ರದೇಶಗಳಲ್ಲಿರುವ ಜನರಿಗೆ ಸುರಕ್ಷತಾ ಸ್ಥಳಗಳಿಗೆ ಸ್ಥಳಾಂತರಗೊಳ್ಳುವಂತೆ ಸೂಚಿಸಿದೆ. ಜತೆಗೆ ಭಾರಿ ಪ್ರಮಾಣದಲ್ಲಿ ಗಾಳಿ ಬೀಸುವ ಮುನ್ಸೂಚನೆ ಇರುವ ಕಾರಣ ಗುಡ್ಡಗಾಡು ಪ್ರದೇಶದಲ್ಲಿ ರಾತ್ರಿ ವೇಳೆ ಸಂಚಾರ ಕೈಗೊಳ್ಳದಂತೆ ನಾಗರಿಕರಿಗೆ ಎಚ್ಚರಿಕೆ ನೀಡಿದೆ.