ಕಲ್ಲಪಳ್ಳಿ: ಕೇರಳದ ಕ್ರೀಡಾ ಮತ್ತು ಕಲಾ ಉತ್ಸವ ಕೇರಳೋತ್ಸವದ ಪನತ್ತಡಿ ಪಂಚಾಯತ್ ಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ಪ್ರೀತಿ ಕಲಾ ಮತ್ತು ಕ್ರೀಡಾ ಸಂಘ ಚಾಂಪಿಯನ್ ಆಗಿ ಹೊರ ಹೊಮ್ಮಿದೆ. ಯುವಶಕ್ತಿ ಚೆರಂಗಡವ್ ತಂಡ ದ್ವಿತೀಯ ಸ್ಥಾನ ಪಡೆಯಿತು. ಪ್ರಥಮ ಸ್ಥಾನ ಪಡೆದ ಪ್ರೀತಿ ತಂಡ ತಾಲೂಕು ಮಟ್ಟಕ್ಕೆ ಆಯ್ಕೆಯಾಗಿದೆ. ಪನತ್ತಡಿ ಪಂಚಾಯತ್ ಅಧ್ಯಕ್ಷೆ ಪ್ರಸನ್ನ ಪ್ರಸಾದ್, ತಾಲೂಕು ಪಂಚಾಯತ್ ಸದಸ್ಯ ಅರುಣ್ ರಂಗತ್ತಮಲೆ, ಗ್ರಾಮ ಪಂಚಾಯತ್ ಸದಸ್ಯರಾದ ರಾಧಾಕೃಷ್ಣ ಕಲ್ಲಪಳ್ಳಿ, ವೇಣುಗೋಪಾಲ್, ಮಾಜಿ ಸದಸ್ಯೆ ನಳಿನಾಕ್ಷಿ ಮತ್ತಿತರರು ಉಪಸ್ಥಿತರಿದ್ದರು.
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಅಥವಾ 9008417480 ಗೆ ವಾಟ್ಸಪ್ ಮಾಡಿರಿ.