ಕೇರ್ಪಡ: ಧಾರ್ಮಿಕ ಮತ್ತು ಸಂಸ್ಕಾರ ತುಂಬುವ ಶಿಕ್ಷಣವನ್ನು ಮಕ್ಕಳಿಗೆ ನೀಡುವ ಕೆಲಸವನ್ನು ದೇವಸ್ಥಾನಗಳು ನಿರಂತರವಾಗಿ ಮಾಡಬೇಕಾದ ಅನಿವಾರ್ಯತೆ ಇದೆ. ಈ ನಿಟ್ಟಿನಲ್ಲಿ ಕೇರ್ಪಡ ಶ್ರೀ ಮಹಿಷಮರ್ದಿನೀ ಕ್ಷೇತ್ರ ಮಾದರಿ ಎಂದು ಮಾಜಿ ಸಂಸದ ನಳಿನ್ಕುಮಾರ್ ಕಟೀಲ್ ಹೇಳಿದರು. ಕೇರ್ಪಡ ಮಹಿಷಮರ್ದಿನೀ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಂಭ್ರಮದವ ಪ್ರಯುಕ್ತ ಜ.2ರಂದು ನಡೆದ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಧರ್ಮ – ದೇವರು – ದೇಶ ವಿಚಾರವಾಗಿ
ಮಾತನಾಡಿದರು. ನಮ್ಮ ಸಂಸ್ಕೃತಿ, ಸಂಸ್ಕಾರವನ್ನು ನೀಡುವ ಮೂಲಕ ಉತ್ತಮ ಪ್ರಜೆಗಳಾಗಿ ಬೆಳೆಸಬೇಕು ಎಂದು ಅವರು ಹೇಳಿದರು.
ಶಾಸಕಿ ಭಾಗೀರಥಿ ಮುರುಳ್ಯ ಅಧ್ಯಕ್ಷತೆ ವಹಿಸಿದ್ದರು.ಮುಖ್ಯ ಅತಿಥಿಗಳಾಗಿ ಎಲಿಮಲೆ ಜ್ಞಾನದೀಪ ವಿದ್ಯಾಸಂಸ್ಥೆಯ ವಿಶ್ವಸ್ಥ ಮಂಡಳಿ ಅಧ್ಯಕ್ಷ ಚಂದ್ರಶೇಖರ ತಳೂರು, ಡಿಸಿಸಿ ಬ್ಯಾಂಕ್ ನಿರ್ದೇಶಕ ಎಸ್.ಎನ್. ಮನ್ಮಥ, ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಮಾಜಿ ಅಧ್ಯಕ್ಷ ನಿತ್ಯಾನಂದ ಮುಂಡೋಡಿ, ಗುತ್ತಿಗಾರು ಶ್ರೀ ಮುತ್ತಪ್ಪ ದೈವಸ್ಥಾನದ ಅಧ್ಯಕ್ಷ ವೆಂಕಟ್ ವಳಲಂಬೆ, ರಾಜ್ಯ ಮೀನುಗಾರಿಕಾ ನಿಗಮ ಮಾಜಿ ಅಧ್ಯಕ್ಷ ಎ.ವಿ. ತೀರ್ಥರಾಮ, ಪೆರುವಾಜೆ ಜಲದುರ್ಗ ದೇವಸ್ಥಾನ ಮಾಜಿ ಅಧ್ಯಕ್ಷ ಉಮೇಶ್ ಕೆ.ಎಂ.ಬಿ. ಭಾಗವಹಿಸಿದ್ದರು.
ವ್ಯವಸ್ಥಾಪನಾ ಸಮಿತಿ ಸದಸ್ಯ ವೆಂಕಪ್ಪ ಗೌಡ ಆಲಾಜೆ, ಮಹಿಷ ಮರ್ದಿನೀ ದೇವಸ್ಥಾನದ ಸೇವಾ ಸಮಿತಿ ಅಧ್ಯಕ್ಷ ಶಿವಾನಂದ ಬೊಳ್ಕಜೆ, ಕಾರ್ಯದರ್ಶಿ ಗಿರೀಶ್ ಬಾನಡ್ಕ ವೇದಿಕೆಯಲ್ಲಿ ಇದ್ದರು. ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ವಸಂತ ನಡುಬೈಲು ಸ್ವಾಗತಿಸಿದರು. ಉಪನ್ಯಾಸಕ ಐತಪ್ಪ ಅಲೆಕ್ಕಾಡಿ ಕಾರ್ಯಕ್ರಮ ನಿರೂಪಿಸಿದರು.