ಕೇರ್ಪಡ:ಕಡಬ ತಾಲೂಕಿನ ಎಡಮಂಗಲ ಗ್ರಾಮದ ಕೇರ್ಪಡ ಶ್ರೀ ಮಹಿಷಮರ್ದಿನೀ ದೇವಸ್ಥಾನದಲ್ಲಿ ಅಷ್ಟಬಂಧ ಬ್ರಹ್ಮಕಲಶೋತ್ಸವ ಜ.6ರಂದು ಕ್ಷೇತ್ರದ ತಂತ್ರಿಗಳಾದ ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ವಿವಿಧ ವೈದಿಕ ಕಾರ್ಯಕ್ರಮಗಳೊಂದಿಗೆ ನಡೆಯಿತು. ಬೆಳಿಗ್ಗೆ

5.00 ರಿಂದ ಮಹಾಗಣಪತಿ ಹೋಮ, ಚಂಡಿಕಾಹೋಮ ಅರಂಭಗೊಂಡಿತು. 8-23 ರಿಂದ 09-23 ವರೆಗಿನ ಮಕರ ಲಗ್ನ ಶುಭಮುಹೂರ್ತದಲ್ಲಿ ಶ್ರೀ ಮಹಿಷಮರ್ದಿನೀ ದೇವರಿಗೆ ಅಷ್ಟಬಂಧಕ್ರಿಯೆ ಬ್ರಹ್ಮಕಲಶಾಭಿಷೇಕ ನಡೆಯಿತು.

ಮಧ್ಯಾಹ್ನ ಗಂಟೆ 12.00ಕ್ಕೆ : ಚಂಡಿಕಾ ಹೋಮದ ಪೂರ್ಣಾಹುತಿ, ಸುವಾಸಿನೀ ಆರಾಧನೆ, ಮಹಾಪೂಜೆ, ವೈದಿಕಮಂತ್ರಾಕ್ಷತೆ, ಅನ್ನಸಂತರ್ಪಣೆ ನಡೆಯಿತು.ದೇವಳದ ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷೆ ಶಾಸಕಿ ಭಾಗೀರಥಿ ಮುರುಳ್ಯ, ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ವಸಂತ ನಡುಬೈಲು, ವ್ಯವಸ್ಥಾಪನಾ ಸಮಿತಿ ಸದಸ್ಯರು, ಬ್ರಹ್ಮಕಲಶೋತ್ಸವ ಸಮಿತಿ ಪದಾಧಿಕಾರಿಗಳು ಸೇರಿದಂತೆ ಸಾವಿರಾರು ಮಂದಿ ಉಪಸ್ಥಿತರಿದ್ದರು.


.