ಕೇರ್ಪಡ: ಎಡಮಂಗಲ ಗ್ರಾಮದ ಕೇರ್ಪಡ ಶ್ರೀ ಮಹಿಷಮರ್ದಿನೀ ದೇವಸ್ಥಾನದಲ್ಲಿ ಅಷ್ಟಬಂಧ ಬ್ರಹ್ಮಕಲಶೋತ್ಸವವು ಇಂದಿನಿಂದ 7ರ ತನಕ ಕ್ಷೇತ್ರದ ತಂತ್ರಿಗಳಾದ ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ವಿವಿಧ ವೈದಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ. ಪ್ರತಿ ದಿನ ವೈದಿಕ, ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ವಿಜ್ರಂಭಣೆಯ ಬ್ರಹ್ಮಕಲಶೋತ್ಸವ ನಡೆಯಲಿದೆ. ಅಷ್ಟಬಂಧ ಬ್ರಹ್ಮಕಲಶೋತ್ಸವಕ್ಕೆ ಹಸಿರುವಾಣಿ ಸಮರ್ಪಣೆ

ಜ.1ರಂದು ನಡೆಯಿತು. ಕ್ಷೇತ್ರದಲ್ಲಿ ಸಾಮೂಹಿಕ ಪ್ರಾರ್ಥನೆ, ಉಗ್ರಾಣ ಮುಹೂರ್ತ ಆದ ಬಳಿಕ ಊರ ಹಾಗೂ ಪರಊರ ಭಕ್ತಾಭಿಮಾನಿಗಳು ಹಸಿರು ಹೊರೆಕಾಣಿಕೆ ಸಮರ್ಪಣೆ ಮಾಡಿದರು. ಅಲೆಕ್ಕಾಡಿಯಿಂದ ದೇವಸ್ಥಾನದವರೆಗೆ ವೈಭವದ ಹಸಿರುವಾಣಿ ಮೆರವಣಿಗೆ ನಡೆಯಿತು. ದೇವಳದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ವಸಂತ ನಡುಬೈಲು ಅವರು ಹಸಿರುವಾಣಿ ಮೆರವಣಿಗೆಗೆ ಚಾಲನೆ ನೀಡಿದರು.ಬಳಿಕ

ಹತ್ತಾರು ವಾಹನಗಳ ಮೂಲಕ ಹಸಿರುವಾಣಿ ತಂದು ದೇವಾಲಯಕ್ಕೆ ಸಮರ್ಪಿಸಲಾಯಿತು. ವ್ಯವಸ್ಥಾಪನಾ ಸಮಿತಿಯ ಸದಸ್ಯರು, ಬ್ರಹ್ಮಕಲಶೋತ್ಸವ ಸಮಿತಿಯ ಪದಾಧಿಕಾರಿಗಳು, ಮಹಿಷಮರ್ದಿನಿ ಕಲಾ ಸಂಘದ ಪದಾಧಿಕಾರಿಗಳು ಮತ್ತಿತರರು ಉಪಸ್ಥಿತರಿದ್ದರು.
ದೇವಸ್ಥಾನದ ಜಾತ್ರೋತ್ಸವ ಹಾಗೂ ದೈವಗಳ ನೇಮೋತ್ಸವಕ್ಕೆ ಈ ಸಂದರ್ಭದಲ್ಲಿ ಗೊನೆ ಮುಹೂರ್ತ ನಡೆಯಿತು.ಅಷ್ಟಬಂಧ ಬ್ರಹ್ಮ ಕಲಶೋತ್ಸವದ ಬಳಿಕ ಜ.7ರಂದು ಜಾತ್ರೋತ್ಸವ, ದೈವಗಳ ನೇಮೋತ್ಸವ ನಡೆಯಲಿದೆ

