ಸುಳ್ಯ:ಗ್ರಾಮದಲ್ಲಿ ಶಾಶ್ವತ ಕುಡಿಯುವ ನೀರಿನ ಯೋಜನೆಗಳ ಅನುಷ್ಠಾನಕ್ಕೆ ಮತ್ತು ಗ್ರಾಮೀಣ ರಸ್ತೆಯ ಅಭಿವೃದ್ಧಿಗೆ ಹೆಚ್ಚು ಒತ್ತು ನೀಡಲಾಗುವುದು ಎಂದು ಅರಂತೋಡು ಗ್ರಾಮ ಪಂಚಾಯತ್ ನೂತನ ಅಧ್ಯಕ್ಷ ಕೇಶವ ಅಡ್ತಲೆ ಹೇಳಿದ್ದಾರೆ. ಎರಡು ಗ್ರಾಮಗಳಲ್ಲಿ ಗ್ರಾಮೀಣ ರಸ್ತೆಗಳ ಕಾಂಕ್ರೀಟೀಕರಣ, ಸೇತುವೆಗಳ ಅಭಿವೃದ್ಧಿಗೆ ಆದ್ಯತೆ ನೀಡಿ ಗ್ರಾಮದ ಸಮಗ್ರ ಅಭಿವೃದ್ಧಿಗೆ ಪ್ರಯತ್ನ ನಡೆಸುತ್ತೇವೆ. ಜನರ ಹಾಗೂ
ಸದಸ್ಯರ ಅಭಿಪ್ರಾಯಗಳನ್ನು ಪಡೆದು ಸಾರ್ವಜನಿಕ ಕ್ಷೇತ್ರದ ಕ್ರಿಯಾಶೀಲತೆಯನ್ನು ಗಮನಿಸಿಕೊಂಡು ಪಕ್ಷ ನಿರ್ಧಾರ ಕೈಗೊಂಡು ಅವಕಾಶ ನೀಡಿದೆ. ಪಕ್ಷದ ನಿರ್ಧಾರವನ್ನು ಎಲ್ಲರೂ ಗೌರವಿಸಬೇಕು ಎಂದು ಅವರು ಹೇಳಿದರು.
ಬಿಜೆಪಿ ಒಂದು ಕುಟುಂಬ ಇದ್ದಂತೆ ಎಲ್ಲರೂ ಒಟ್ಟಾಗಿ ಗ್ರಾಮದ ಅಭಿವೃದ್ಧಿಗೆ ದುಡಿಯುವ ವಿಶ್ವಾಸ ಇದೆ:ಕುತ್ತಮೊಟ್ಟೆ
ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಎಲ್ಲರೂ ಒಟ್ಟಾಗಿ ಗ್ರಾಮದ ಅಭಿವೃದ್ಧಿಗೆ ಶ್ರಮಿಸಿ ಮಾದರಿ ಪಂಚಾಯತ್ ಆಗಿ ರೂಪಿಸುವ ವಿಶ್ವಾಸ ಇದೆ ಎಂದು ಬಿಜೆಪಿ ಮುಖಂಡ ಹಾಗೂ ಅರಂತೋಡು ತೊಡಿಕಾನ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಸಂತೋಷ್ ಕುತ್ತಮೊಟ್ಟೆ ಹೇಳಿದ್ದಾರೆ. ಆಕಾಂಕ್ಷಿಗಳು ಜಾಸ್ತಿ ಇದ್ದ ಸಂದರ್ಭದಲ್ಲಿ ಕೆಲವೊಂದು ಸಣ್ಣಪುಟ್ಟ ಗೊಂದಲಗಳಿಂದ ಗ್ರಾ.ಪಂ.ಅಧ್ಯಕ್ಷತೆಗೆ ಸ್ಪರ್ಧೆ ಏರ್ಪಪ್ಪಟ್ಟಿದೆ. ಬಿಜೆಪಿ ಒಂದು ಕುಟುಂಬ ಇದ್ದಂತೆ ಎಲ್ಲರೂ ಒಟ್ಟಾಗಿ ಕುಳಿತು ಮಾತನಾಡಿ ಎಲ್ಲಾ ಗೊಂದಲಗಳನ್ನು ಪರಿಹರಿಸುತ್ತೇವೆ ಎಂದು ಅವರು ಹೇಳಿದರು.