ಸುಳ್ಯ: ಸುಮಾರು 12 ವರ್ಷಗಳಿಂದ ಹೊರಗುತ್ತಿಗೆ ಆಧಾರದಲ್ಲಿ ಕೆಎಫ್ಡಿಸಿಯಲ್ಲಿ ನೌಕರರಾಗಿ ಕೆಲಸ ನಿರ್ವಹಿಸುತ್ತಿರುವ ಮೇಲ್ವಿಚಾರಕ ನೌಕರರನ್ನು ನಿಗಮದಿಂದ ಬಂದ ತುರ್ತು ಆದೇಶದಂತೆ ಕೆಲಸದಿಂದ ಬಿಡುಗಡೆ ಗೊಳಿಸಿರುವ ಕುರಿತು ತಮಿಳು ಕಾರ್ಮಿಕ ಮುಖಂಡರು ಮತ್ತು ಕಾರ್ಮಿಕರ ನಿಯೋಗ ಕಾಂಗ್ರೆಸ್ ಮುಖಂಡರನ್ನು ಭೇಟಿ ಮಾಡಿ
ಚರ್ಚೆ ನಡೆಸಿದರು. ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ಸಿ.ಜಯರಾಮ ಮತ್ತು ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಎನ್ ಜಯಪ್ರಕಾಶ್ ರೈ ಅವರನ್ನು ಭೇಟಿಯಾಗಿ ವಿಷಯವನ್ನು ಗಮನಕ್ಕೆ ತಂದರು.ಈ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ಮಾಜಿ ಸಚಿವ ಬಿ ರಮಾನಾಥ ರೈ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ರವರ ಗಮನಕ್ಕೆ ತಂದು ನಿಗಮದ ವ್ಯವಸ್ಥಾಪಕ ನಿರ್ದೇಶಕರಿಗೆ ದೂರವಾಣಿ ಕರೆ ಮೂಲಕ ಸಂಪರ್ಕಿಸಿ ನೀಡಿರುವ ಆದೇಶಕ್ಕೆ ತಾತ್ಕಾಲಿಕ ತಡೆ ತಂದು ಕಾರ್ಮಿಕರ ಸಮಸ್ಯೆಗೆ ಕೂಡಲೇ ಸ್ಪಂದಿಸಲಾಗಿದೆ ಎಂದು ಕಾಂಗ್ರೆಸ್ ಮುಖಂಡರು ತಿಳಿಸಿದ್ದಾರೆ.
ನಿಯೋಗದಲ್ಲಿ ಕಾರ್ಮಿಕ ಮುಖಂಡರಾದ ಚಂದ್ರಲಿಂಗಮ್, ಶಿವಕುಮಾರ್ ಕೌಡಿಚಾರ್, ರಾಮಸ್ವಾಮಿ (ಆನಂದ), ಕಣ್ಣ ದಾಸ್ ಮೊದಲಾದವರು ಇದ್ದರು. ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಕಾರ್ಯದರ್ಶಿ ಪಿ ಎಸ್ ಗಂಗಾಧರ್, ಪ್ರಮುಖರಾದ ಸುರೇಶ್ ಎಂ ಹೆಚ್, ಗೋಕುಲ್ ದಾಸ್, ದಿನೇಶ್ ಅಂಬೆಕಲ್ಲು, ಭವಾನಿಶಂಕರ್ ಕಲ್ಮಡ್ಕ, ನಂದರಾಜ್ ಸಂಕೇಶ್, ಚೇತನ್ ಕಜೆಗದ್ದೆ ಉಪಸ್ಥಿತರಿದ್ದರು.