ಸುಳ್ಯ: ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರು ಸುಳ್ಯಕ್ಕೆ ಆಗಮಿಸಿದ್ದಾರೆ.ಸುಳ್ಯದ ಇತಿಹಾಸದಲ್ಲಿ ಪ್ರಥಮ ಬಾರಿಗೆ ಸುಳ್ಯಕ್ಕೆ ಎಐಸಿಸಿ ಅಧ್ಯಕ್ಷರು ಆಗಮಿಸಿದ್ದಾರೆ. ಹೆಲಿಕಾಪ್ಟರ್ ಮೂಲಕ ಮಲ್ಲಿಕಾರ್ಜುನ ಖರ್ಗೆ ಅವರು ಮಂಗಳೂರಿನಿಂದ ಸುಳ್ಯಕ್ಕೆ ಆಗಮಿಸಿದ್ದಾರೆ. ಮಹಾತ್ಮಾ ಗಾಂಧಿ
ಮಲ್ನಾಡ್ ಪ್ರೌಢ ಶಾಲೆಯ ಗ್ರೌಂಡ್ನಲ್ಲಿ ಸಿದ್ಧಗೊಳಿಸಿದ್ದ ಹೆಲಿಪ್ಯಾಡ್ನಲ್ಲಿ ಇಳಿದ ಅವರನ್ನು ಸುಳ್ಯ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜಿ.ಕೃಷ್ಣಪ್ಪ ನೇತೃತ್ವದಲ್ಲಿ ಸ್ವಾಗತಿಸಲಾಯಿತು.ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಧನಂಜಯ ಅಡ್ಪಂಗಾಯ, ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷ ಹರೀಶ್ ಕುಮಾರ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ಸಿ.ಜಯರಾಮ, ಟಿ.ಎಂ.ಶಹೀದ್ ತೆಕ್ಕಿಲ್, ಶಕುಂತಲಾ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು. ಬಳಿಕ ಖರ್ಗೆ ಅವರು ಚೆನ್ನಕೇಶವ ದೇವಸ್ಥಾನದ ಮುಂಭಾಗದ ಗ್ರೌಂಡ್ನಲ್ಲಿ ನಡೆಯುವ ಸಮಾವೇಶದ ವೇದಿಕೆಗೆ ಆಗಮಿಸಿದರು.