ಹೊಸದಿಲ್ಲಿ: ಕಾಂಗ್ರೆಸ್ ಪಕ್ಷದ ನೂತನ ರಾಷ್ಟ್ರಾಧ್ಯಕ್ಷರಾಗಿ ಮಲ್ಲಿಕಾರ್ಜುನ ಖರ್ಗೆ ಅಧಿಕಾರ ಸ್ವೀಕರಿಸಿದ್ದಾರೆ. ಈ ವೇಳೆ ಚುನಾವಣಾ ಪ್ರಮಾಣಪತ್ರವನ್ನು ಕಾಂಗ್ರೆಸ್ ಪಕ್ಷದ ಕೇಂದ್ರ ಚುನಾವಣಾ ಪ್ರಾಧಿಕಾರದ ಅಧ್ಯಕ್ಷರಾದ
ಮಧುಸೂಧನ್ ಮಿಸ್ತ್ರಿ ಖರ್ಗೆಯವರಿಗೆ ಹಸ್ತಾಂತರಿಸಿದರು ಮತ್ತು ಪ್ರಮಾಣವಚನ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಪ್ರಿಯಾಂಕಾ ವಾದ್ರಾ ಸೇರಿದಂತೆ ಹಲವಾರು ನಾಯಕರು ಉಪಸ್ಥಿತರಿದ್ದರು.
ಸೋನಿಯಾ ಸೇರಿದಂತೆ ಸೇರಿದ್ದ ನಾಯಕರು ಈ ವೇಳೆ ನೂತನ ಅಧ್ಯಕ್ಷರನ್ನು ಅಭಿನಂಧಿಸಿ, ಶುಭ ಹಾರೈಸಿದರು. ಇತ್ತೀಚೆಗೆ ನಡೆದ ಎಐಸಿಸಿ ಅಧ್ಯಕ್ಷೀಯ ಚುನಾವಣೆಯಲ್ಲಿ ಕರ್ನಾಟಕದ ಹಿರಿಯ ಕಾಂಗ್ರೆಸ್ ಮುಖಂಡರಾದ ಮಲ್ಲಿಕಾರ್ಜುನ ಖರ್ಗೆ ಅವರು ಭರ್ಜರಿ ಗೆಲುವು ಸಾಧಿಸಿದ್ದರು.