ಸುಳ್ಯ:ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಸುಳ್ಯ ತಾಲೂಕು ಸಮಿತಿ ವತಿಯಿಂದ ಪತ್ರಿಕಾ ದಿನಾಚರಣೆ ಮತ್ತು ಆಟಿ ಉತ್ಸವ ಕಾರ್ಯಕ್ರಮ ರಂಗಮಯೂರಿ ಕಲಾಶಾಲೆಯಲ್ಲಿ ನಡೆಯಿತು. ಕಾರ್ಯಕ್ರಮವನ್ನು ಶಾಸಕಿ ಭಾಗೀರಥಿ ಮುರುಳ್ಯ ಉದ್ಘಾಟಿಸಿ ಶುಭಹಾರೈಸಿದರು. ಕೆ.ಜೆ.ಯು. ಸುಳ್ಯ ತಾಲೂಕು ಘಟಕದ ಅಧ್ಯಕ್ಷ ಈಶ್ವರ ವಾರಣಾಶಿ ಅಧ್ಯಕ್ಷತೆ ವಹಿಸಿದ್ದರು.
ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ದ.ಕ. ಜಿಲ್ಲಾಧ್ಯಕ್ಷ ಹಾಗೂ
ಕರ್ನಾಟಕ ರಾಜ್ಯ ತುಳು ಸಾಹಿತ್ಯಅಕಾಡೆಮಿಯ ಅಧ್ಯಕ್ಷ ತಾರಾನಾಥ ಗಟ್ಟಿ ಕಾಪಿಕಾಡ್ ಉಪನ್ಯಾಸ ನೀಡಿದರು.ಈ ಸಂದರ್ಭದಲ್ಲಿ ಕೆ.ಜೆ.ಯು. ದ.ಕ. ಜಿಲ್ಲಾ ಗೌರವಾಧ್ಯಕ್ಷ ಹರೀಶ್ ಬಂಟ್ವಾಳ್ , ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ. ಬಿ. ಹರೀಶ್ ರೈ , ಹಿರಿಯ ನಾಟ್ಯ ವೈದ್ಯರಾದ ರಾಮಣ್ಣ ನಾಯ್ಕ ನೀರಬಿದಿರೆ ಅವರನ್ನು ಸನ್ಮಾನಿಸಿ, ಗೌರವಿಸಲಾಯಿತು.
ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ನೂತನ ಅಧ್ಯಕ್ಷರಾದ ಸದಾನಂದ ಮಾವಜಿ ಸನ್ಮಾನ ನೆರವೇರಿಸಿದರು. ಇದೇ ಸಂದರ್ಭದಲ್ಲಿ ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ನೂತನ ಅಧ್ಯಕ್ಷರಾದ ಸದಾನಂದ ಮಾವಜಿ, ಅರೆಭಾಷೆ ಅಕಾಡೆಮಿ ಸದಸ್ಯರಾದ ಲೋಕೇಶ್ ಊರುಬೈಲು, ಚಂದ್ರಾವತಿ ಬಡ್ಡಡ್ಕ ಅವರನ್ನು ಗೌರವಿಸಲಾಯಿತು. ವೇದಿಕೆಯಲ್ಲಿ ಕೆ.ಜೆ.ಯು. ದ.ಕ. ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಕೆನ್ಯೂಟ್ ಪಿಂಟೋ, ಜಿಲ್ಲಾ ಘಟಕದ ಕೋಶಾಧಿಕಾರಿ ಗಿರಿಧರ ಶೆಟ್ಟಿ, ಸುಳ್ಯ ತಾಲೂಕು ಘಟಕದ ಗೌರವಾಧ್ಯಕ್ಷ ಶಿವಪ್ರಸಾದ್ ಆಲೆಟ್ಟಿ, ಕಾರ್ಯದರ್ಶಿ ಜಯಶ್ರೀ ಕೊಯಿಂಗೋಡಿ, ಕೋಶಾಧಿಕಾರಿ ವಿನಯ್ ಜಾಲ್ಸೂರು ಉಪಸ್ಥಿತರಿದ್ದರು. ಸುಳ್ಯ ತಾಲೂಕು ಘಟಕದ ನಿರ್ದೇಶಕ ಶಿವರಾಮ ಕಜೆಮೂಲೆ ಸ್ವಾಗತಿಸಿ, ಪ್ರಧಾನ ಕಾರ್ಯದರ್ಶಿ ಜಯಶ್ರೀ ಕೊಯಿಂಗೋಡಿ ವಂದಿಸಿದರು.
ಬಳಿಕ ಆಟಿಯ ತಿಂಡಿ – ತಿನಿಸುಗಳ ವಿಶೇಷ ಸಹಭೋಜನ ನಡೆಯಿತು. ವಿವಿಧ ಸ್ಪರ್ಧೆಗಳು ನಡೆಯಿತು.