ಸುಳ್ಯ:ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಸುಳ್ಯ ತಾಲೂಕು ಘಟಕದ ವತಿಯಿಂದ ಪತ್ರಿಕಾ ದಿನಾಚರಣೆ ಮತ್ತು ಆಟಿಕೂಟ ಕಾರ್ಯಕ್ರಮ ಸುಳ್ಯದ ರಂಗಮಯೂರಿ ಕಲಾಶಾಲೆಯಲ್ಲಿ ಜು. 22 ರಂದು ನಡೆಯಿತು.
ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ಆಚರಣೆಗಳ ಮೂಲಕ
ನಮ್ಮ ಹಿರಿಯರಿಂದ ಬಳುವಳಿಯಾಗಿ ಬಂದ ಮೂಲ ನಂಬಿಕೆ, ನಮ್ಮ ಸಂಪ್ರದಾಯಗಳನ್ನು ಉಳಿಸಿಕೊಳ್ಳಬೇಕು ಎಂದರು.
ನಿವೃತ್ತ ಪ್ರಾಧ್ಯಾಪಕ ಡಾ. ವಿಶ್ವನಾಥ ಬದಿಕಾನ ಆಟಿ ಮತ್ತು ಪತ್ರಿಕಾ ದಿನದ ಕುರಿತು ವಿಶೇಷ ಉಪನ್ಯಾಸ ನೀಡಿದರು. ಗೂಗಲ್ನಿಂದ ಡೌನ್ಲೋಡ್ ಮಾಡುವುದನ್ನು ಕಡಿಮೆ ಮಾಡಿ ಜನರಿಗೆ ಜ್ಞಾನವನ್ನು ಅಪ್ಲೋಡ್ ಮಾಡುವ ಕೆಲಸ ಅಗಬೇಕಾಗಿದೆ. ಪತ್ರಿಕೆಗಳು ಆ ಕಾರ್ಯವನ್ನು ಮಾಡುತ್ತಿದೆ ಎಂದರು.
ಕೆಜೆಯು ಸುಳ್ಯ ತಾಲೂಕು ಘಟಕದ ಅಧ್ಯಕ್ಷ ಯಶ್ವಿತ್ ಕಾಳಂಮನೆ ಅಧ್ಯಕ್ಷತೆ ವಹಿಸಿದರು.ಮುಖ್ಯ ಅತಿಥಿಗಳಾಗಿ ಕೆಜೆಯು ಜಿಲ್ಲಾ ಗೌರವಾಧ್ಯಕ್ಷ ಹರೀಶ್ ಬಂಟ್ವಾಳ್, ಕೆಜೆಯು ಜಿಲ್ಲಾಧ್ಯಕ್ಷ ಈಶ್ವರ ವಾರಣಾಶಿ, ಪ್ರೆಸ್ಕ್ಲಬ್ ಅಧ್ಯಕ್ಷ ಶರೀಫ್ ಜಟ್ಟಿಪಳ್ಳ ಉಪಸ್ಥಿತರಿದ್ದರು. ವೇದಿಕೆಯಲ್ಲಿ ಕೆಜೆಯು ತಾಲೂಕು ಘಟಕದ ಗೌರವಾಧ್ಯಕ್ಷೆ ಜಯಶ್ರೀ ಕೊಯಿಂಗೋಡಿ, ಕಾರ್ಯದರ್ಶಿ ಶ್ರೀಜಿತ್ ಸಂಪಾಜೆ, ಕೋಶಾಧಿಕಾರಿ ಅನಿಲ್ ಕಳಂಜ ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಹಿರಿಯ ಪತ್ರಿಕಾ ವಿತರಕರಾದ ಅಪ್ಪಕುಂಞಿ ನಾರ್ಕೋಡು ಹಾಗೂ ಎಸ್.ಎನ್. ಪ್ರಸಾದ್ ಪಂಜಿಕಲ್ಲು ಅವರನ್ನು ಸನ್ಮಾನಿಸಲಾಯಿತು.
ಚೈತ್ರ ವಿನಯ್ ಪ್ರಾರ್ಥಿಸಿ, ಜಯಶ್ರೀ ಕೊಯಿಂಗೋಡಿ ಸ್ವಾಗತಿಸಿದರು.ರಮೇಶ್ ನೀರಬಿದಿರೆ ಮತ್ತು ಅನಿಲ್ ಕಳಂಜ ಸನ್ಮಾನಿತರ ಪರಿಚಯ ಪತ್ರ ವಾಚಿಸಿದರು. ಶ್ರೀಜಿತ್ ಸಂಪಾಜೆ ವಂದಿಸಿದರು.
ಕೆಜೆಯು ಪೂರ್ವಾಧ್ಯಕ್ಷ ಶಿವಪ್ರಸಾದ್ ಆಲೆಟ್ಟಿ ಕಾರ್ಯಕ್ರಮ ನಿರೂಪಿಸಿದರು.
ಸಭಾ ಕಾರ್ಯಕ್ರಮದ ನಂತರ ಖ್ಯಾತ ಮಿಮಿಕ್ರಿ ಕಲಾವಿದ ಪಟ್ಟಾಭಿರಾಮ ಸುಳ್ಯರವರಿಂದ ಮಿಮಿಕ್ರಿ, ಬಳಿಕ ಆಟಿ ಖಾದ್ಯಗಳೊಂದಿಗೆ ವಿಶೇಷ ಸಹಭೋಜನ ನಡೆಯಿತು. ಚೆನ್ನೆಮಣೆ ಮತ್ತಿತರ ವಿವಿಧ ಆಟಿ ಸ್ಪರ್ಧಾ ಕಾರ್ಯಕ್ರಮ ನಡೆಯಿತು.








