ಚೆನ್ನೈ: ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಇಂದಿನ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಕೋಲ್ಕತ್ತ ನೈಟ್ ರೈಡರ್ಸ್ ತಂಡವು 8 ವಿಕೆಟ್ ಅಂತರದಿಂದ ಗೆಲುವು ಸಾಧಿಸಿದೆ. ಟಾಸ್ ಸೋತು ಮೊದಲು ಬ್ಯಾಟಿಂಗ್ಗೆ ಇಳಿದ ಚೆನ್ನೈ ಸೂಪರ್ ಕಿಂಗ್ಸ್ 20 ಓವರ್ಗಳಲ್ಲಿ
9 ವಿಕೆಟ್ ಕಳೆದುಕೊಂಡು ಕೇವಲ 103 ರನ್ ಗಳಿಸಿತು. 104 ರನ್ಗಳ ಸಾಧಾರಣ ಮೊತ್ತ ಬೆನ್ನತ್ತಿದ 10.1 ಓವರ್ಗಳಲ್ಲಿ 2 ವಿಕೆಟ್ ಕಳೆದುಕೊಂಡು 107 ರನ್ ಗಳಿಸಿ ಗೆಲುವಿನ ನಗೆ ಬೀರಿತು.
ಕೆಕೆಆರ್ ಪರ ಸುನಿಲ್ ನರೈನ್ ಕೇವಲ 18 ಎಸೆತಗಳಲ್ಲಿ 5 ಸಿಕ್ಸರ್ ಮತ್ತು 2 ಬೌಂಡರಿ ಸಹೀತ 44 ರನ್ ಗಳಿಸಿದರು. ಕ್ವಿಂಟನ್ ಡಿಕಾಕ್ 23, ಅಜಿಕ್ಯಾಂ ರಹಾನೆ 20, ರಿಂಕು ಸಿಂಗ್ 15 ರನ್ ಗಳಿಸಿದರು. ಮೊದಲು ಬ್ಯಾಟ್ ಮಾಡಿದ ಚೆನ್ನೈ ಬ್ಯಾಟರ್ಗಳು ರನ್ ಗಳಿಸಲು ಪರದಾಡಿದರು. 31 ರನ್ ಗಳಿಸಿದ ಶಿವಂ ದುಬೆ ಟಾಪ್ ಸ್ಕೋರರ್ ಆದರು. ಸುನಿಲ್ ನರೈನ್ 3 ವಿಕೆಟ್ ಪಡೆದರೆ ಹರ್ಷಿತ್ ರಾಣಾ, ವರುಣ್ ಚಕ್ರವರ್ತಿ ತಲಾ 2 ವಿಕೆಟ್ ಉರುಳಿಸಿದರು.