ಕೋಲ್ಕತ್ತ: ಕೋಲ್ಕತ್ತ ನೈಟ್ ರೈಡರ್ಸ್ ತಂಡವು ಐಪಿಎಲ್ ಪಂದ್ಯದಲ್ಲಿ ಲಖನೌ ಸೂಪರ್ಜೈಂಟ್ಸ್ ತಂಡದ ವಿರುದ್ಧ 8 ವಿಕೆಟ್ಗಳ ಭರ್ಜರಿ ಜಯ ದಾಖಲಿಸಿದೆ. ಮೊದಲು ಬ್ಯಾಟ್ ಮಾಡಿದ ಲಖನೌ 20 ಓವರ್ಗಳಲ್ಲಿ 7 ವಿಕೆಟ್ ನಷ್ಟಕ್ಕೆ 161 ರನ್ ಗಳಿಸಿತು. ಕೆಕೆಆರ್ 15.4 ಓವರ್ಗಳಲ್ಲಿ
2 ವಿಕೆಟ್ ಕಳೆದುಕೊಂಡು 162 ರನ್ ಗಳಿಸಿ ಗೆಲುವಿನ ಗುರಿ ತಲುಪಿತು.ಆರಂಭಿಕ ಬ್ಯಾಟರ್ ಫಿಲ್ ಸಾಲ್ಟ್ 47 ಎಸೆತಗಳಲ್ಲಿ ಅಜೇಯ 89 ರನ್ ಸಿಡಿಸುವ ಮೂಲಕ ತಂಡದ ಗೆಲುವಿನಲ್ಲಿ ಮಹತ್ವದ ಪಾತ್ರ ವಹಿಸಿದರು. ಇದರಲ್ಲಿ 3 ಸಿಕ್ಸರ್ ಮತ್ತು 14 ಬೌಂಡರಿಗಳಿದ್ದವು.
ನಾಯಕ ಶ್ರೇಯಸ್ ಅಯ್ಯರ್ ಅಜೇಯ 38 ರನ್ ಸಿಡಿಸಿ ಉತ್ತಮ ಸಾಥ್ ನೀಡಿದರು.
ಟಾಸ್ ಸೋತು ಬ್ಯಾಟಿಂಗ್ ಆಹ್ವಾನ ಪಡೆದ ಲಖನೌ ಬ್ಯಾಟರ್ಗಳು ಆರಂಭದಿಂದಲೂ ರನ್ ಗಳಿಸಲು ಪರದಾಡಿದರು.
ಕ್ವಿಂಟನ್ ಡಿಕಾಕ್ 10 ರನ್ ಗಳಿಸಿದರೆ, ದೀಪಕ್ ಹೂಡಾ 8 ರನ್ಗೆ ಪೆವಿಲಿಯನ್ ಸೇರಿಕೊಂಡರು. ನಾಯಕ ಕೆ.ಎಲ್. ರಾಹುಲ್ 39 ರನ್ ಸಿಡಿಸಿದರು. ಆಯುಶ್ ಬದೋನಿ 29 ಮತ್ತು ನಿಕೊಲಸ್ ಪೂರನ್ 45 ರನ್ ಸಿಡಿಸುವ ಮೂಲಕ ತಂಡದ ಉತ್ತಮ ಮೊತ್ತಕ್ಕೆ ನೆರವಾದರು.
ಉತ್ತಮ ಬೌಲಿಂಗ್ ದಾಳಿ ಸಂಘಟಿಸಿದ ವೇಗಿ ಮಿಚೆಲ್ ಸ್ಟಾರ್ಕ್ 28 ರನ್ ನೀಡಿ 3 ವಿಕೆಟ್ ಪಡೆದರು.