ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ವಿರುದ್ಧ ಕೋಲ್ಕತ್ತ ನೈಟ್ ರೈಡರ್ಸ್ 7 ವಿಕೆಟ್ಗಳ ಜಯ ದಾಖಲಿಸಿದೆ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 20 ಓವರ್ಗಳಲ್ಲಿ 6 ವಿಕೆಟ್ ಕಳೆದುಕೊಂಡು 182 ರನ್ ಗಳಿಸಿತು.183 ರನ್ಗಳ ಗೆಲುವಿನ ಗುರಿ ಬೆನ್ನಟ್ಟಿದ ಕೆಕೆಆರ್ 16.5 ಓವರ್ಗಳಲ್ಲಿ
3 ವಿಕೆಟ್ ನಷ್ಟಕ್ಕೆ 186 ರನ್ ಗಳಿಸಿ ಗೆಲುವಿನ ನಗೆ ಬೀರಿತು. ಕೆಕೆಆರ್ ಪರ ವೆಂಕಟೇಶ್ ಅಯ್ಯರ್ 30 ಎಸೆತಗಳಲ್ಲಿ 3 ಬೌಂಡರಿ ಹಾಗೂ 4 ಸಿಕ್ಸರ್ ನೆರವಿನಿಂದ 50, ಸುನಿಲ್ ನರೈನ್ 22,ಎಸೆತಗಳಲ್ಲಿ ಬೌಂಡರಿ ಹಾಗೂ 5 ಸಿಕ್ಸರ್ ನೆರವಿನಿಂದ 47, ಶ್ರೇಯರ್ ಅಯ್ಯರ್ 24 ಎಸೆತಗಳಲ್ಲಿ 2 ಬೌಂಡರಿ ಹಾಗೂ 2 ಸಿಕ್ಸರ್ ನೆರವಿನಿಂದ ಅಜೇಯ 39, ಫಿಲ್ ಸಾಲ್ಟ್ 20 ಎಸೆತಗಳಲ್ಲಿ 2 ಬೌಂಡರಿ ಹಾಗೂ 2 ಸಿಕ್ಸರ್ ನೆರವಿನಿಂ 30 ರನ್ ಬಾರಿಸಿದರು. ನರೈನ್ ಹಾಗೂ ಸಾಲ್ಟ್ ಮೊದಲ ವಿಕೆಟ್ಗೆ 6.3 ಓವರ್ಗಳಲ್ಲಿ 86 ರನ್ ಗಳಿಸಿ ಭದ್ರ ಬುನಾದಿ ಹಾಕಿದರು. ಮೊದಲು ಬ್ಯಾಟ್ ಮಾಡಿದ
ರಾಯಲ್ ಚಾಲೆಂಜರ್ಸ್ ಪರ ಬೆಂಗಳೂರಿನ ವಿರಾಟ್ ಕೊಹ್ಲಿ ಆಕ್ರಮಣಕಾರಿ ಆಟವಾಡಿ 59 ಎಸೆತಗಳಲ್ಲಿ ತಲಾ ನಾಲ್ಕು ಬೌಂಡರಿ ಹಾಗೂ ಸಿಕ್ಸರ್ ನೆರವಿನಿಂದ 83 ರನ್ ಗಳಿಸಿ ಆಜೇಯರಾಗಿ ಉಳಿದರು. ಗ್ಲೆನ್ ಮ್ಯಾಕ್ಸ್ವೇಲ್ 19 ಎಸೆತಗಳಲ್ಲಿ 3 ಬೌಂಡರಿ ಹಾಗೂ 1 ಸಿಕ್ಸರ್ ಸಹೀತ 28, ಕ್ಯಾಮರೂನ್ ಗ್ರೀನ್ 21 ಎಸೆತಗಳಲ್ಲಿ 4 ಬೌಂಡರಿ ಹಾಗೂ 2 ಸಿಕ್ಸರ್ ಸಹೀತ 33 ರನ್ ಗಳಿಸಿದರು. ಕೊನೆಯಲ್ಲಿ ಸ್ಪೋಟಕ ಬ್ಯಾಟಿಂಗ್ ಮಾಡಿದ ದಿನೇಶ್ ಕಾರ್ತಿಕ್ 8 ಎಸೆತಗಳಲ್ಲಿ 3 ಸಿಕ್ಸರ್ ನೆರವಿನಿಂದ ಅಜೇಯ 20 ರನ್ ಗಳಿಸಿ ತಂಡದ ಮೊತ್ತ ಏರಿಸಿದರು