ಕೋಲ್ಕತ್ತ: ಇಂಡಿಯನ್ ಪ್ರೀಮಿಯರ್ ಲೀಗ್ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್ ತಂಡದ ವಿರುದ್ಧ ಕೋಲ್ಕತ್ತ ನೈಟ್ ರೈಡರ್ಸ್ 4 ವಿಕೆಟ್ಗಳ ಜಯ ಸಾಧಿಸಿತು.ಈ ಬಾರಿಯ ಐಪಿಎಲ್ನಲ್ಲಿ ಆಡಿರುವ 6 ಪಂದ್ಯಗಳಲ್ಲಿ ಕೆಕೆಆರ್ ಮೊದಲ ಗೆಲುವಿನ ನಗೆ ಬೀರಿತು,ಟಾಸ್ ಗೆದ್ದ ರಾಜಸ್ಥಾನ ಮೊದಲು
ಬ್ಯಾಟಿಂಗ್ ಮಾಡಿದ ರಾಜಸ್ಥಾನ 20 ಓವರ್ಗಳಲ್ಲಿ 9 ವಿಕೆಟ್ ಕಳೆದುಕೊಂಡು 155 ರನ್ಗಳನ್ನು ಪೇರಿಸಿತು. ವೈಭವ್ ಸೂರ್ಯವಂಶಿ 46, ಜೈಸ್ವಾಲ್ 39 ರನ್ ಗಳಿಸಿದರು. ಉಳಿದ ಬ್ಯಾಟರ್ಗಳು ಕಳಪೆ ಪ್ರದರ್ಶನ ತೋರಿದರು. ಕೆಕೆಆರ್ನ ತ್ಯಾಗಿ, ವರುಣ್ ತಲಾ 3 ವಿಕೆಟ್ ಪಡೆದರು.156 ರನ್ಗಳ ಗುರಿ ಬೆನ್ನಟ್ಟಿದ ಕೋಲ್ಕತ್ತ ನೈಟ್ ರೈಡರ್ಸ್ 2 ಬಾಲ್ಗಳು ಬಾಕಿ ಇರುವಂತೆ 4 ವಿಕೆಟ್ಗಳ ಜಯ ಸಾಧಿಸಿತು. ಮಧ್ಯಮ ಕ್ರಮಾಂಕದಲ್ಲಿ ಬಂದ ರಿಂಕು ಸಿಂಗ್ ಅರ್ಧ ಶತಕ(53) ದಾಖಲಿಸಿ ತಂಡದ ಗೆಲುವಿಗೆ ಕಾರಣರಾದರು.
















