ಮಂಗಳೂರು: ಸುಳ್ಯ ತಾಲೂಕಿನ ವಿವಿಧ ಸಮಸ್ಯೆಗಳಿಗೆ ಪರಿಹಾರ ಒದಗಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವರಿಗೆ ಕೆಪಿಸಿಸಿ ಅಲ್ಪ ಸಂಖ್ಯಾತ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ. ಎಂ. ಮುಸ್ತಫ
ಅರೋಗ್ಯ, ಕುಟುಂಬ ಕಲ್ಯಾಣ ಇಲಾಖೆ ಮತ್ತು ದ. ಕ. ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಅವರಿಗೆ
ಮನವಿ ಸಲ್ಲಿಸಿದರು.
ಮಂಗಳೂರಿನಲ್ಲಿ ಸಚಿವರನ್ನು ಭೇಟಿ ಮಾಡಿ
ಸರಕಾರದ ಸವಲತ್ತುಗಳನ್ನು ಜನರಿಗೆ ತಲುಪಿಸಲು ಮತ್ತು ತಾಲೂಕಿನ ಸಮಸ್ಯೆಗಳಿಗೆ ಪರಿಹಾರ ಒದಗಿಸಲು, ಅಭಿವೃದ್ಧಿ ಕಾರ್ಯಗಳಿಗೆ ವೇಗ ನೀಡಲು ಜಿಲ್ಲಾ ಕೆಡಿಪಿ ಮಾದರಿಯಲ್ಲಿ ತಾಲೂಕು ಮಟ್ಟದಲ್ಲಿ ಕೆಡಿಪಿ ಸಭೆ ನಡೆಸಬೇಕು ಎಂದು ವಿನಂತಿಸಲಾಯಿತು.
ಈ ಸಂದರ್ಭದಲ್ಲಿ ಕರ್ನಾಟಕ ವಿಧಾನಸಭೆ ಸ್ಪೀಕರ್ ಯು. ಟಿ. ಖಾದರ್
ಮುಖಂಡರುಗಳಾದ ಬೆಟ್ಟ ಜಯರಾಮ ಭಟ್, ಬೆಟ್ಟ ರಾಜಾರಾo ಭಟ್ ಉಪಸ್ಥಿತರಿದ್ದರು