ಗೋಣಿಕೊಪ್ಪಲು: ಕೆ.ಬಾಡಗ ಗ್ರಾಮದಲ್ಲಿ ಇಬ್ಬರನ್ನು ಬಲಿ ಪಡೆದಿದ್ದ ಹುಲಿಯನ್ನು ಅರಣ್ಯ ಇಲಾಖೆ ಇಂದು ಜೀವಂತವಾಗಿ ಸೆರೆ ಹಿಡಿದಿದೆ.ನಾಣಚ್ಚಿ ಬಳಿಯ ಕಾಫಿ ತೋಟದಲ್ಲಿ ಅಡಗಿದ್ದ ಹುಲಿಗೆ ಅರಿವಳಿಕೆ ಚುಚ್ಚುಮದ್ದು ನೀಡಿ ಸೆರೆ ಹಿಡಿಯಲಾಯಿತು. ಮಂಗಳವಾರ ಬೆಳಿಗ್ಗೆ 6 ಗಂಟೆಯಿಂದ ಸಾಕಾನೆ ಅಭಿಮನ್ಯು ನೇತೃತ್ವದಲ್ಲಿ 5 ಆನೆಗಳ

ಸಹಾಯದಿಂದ ನಾಗರಹೊಳೆ ಅರಣ್ಯಕ್ಕೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಕಾರ್ಯಾಚರಣೆ ನಡೆಸಲಾಯಿತು. ಹುಲಿ ಹೆಜ್ಜೆಯ ಜಾಡು ಅರಸಿದ ಕೂಂಬಿಂಗ್ ತಂಡ ಮಧ್ಯಾಹ್ನ 2.30ರ ವೇಳೆಗೆ ನಾಣಚ್ಚಿ ಗೇಟ್ ಬಳಿ ವ್ಯಾಘ್ರವನ್ನು ಮೊದಲಿಗೆ ಪತ್ತೆ ಹಚ್ಚಿತ್ತು. ಬಳಿಕ ಅರವಳಿಕೆ ಚುಚ್ಚು ಮದ್ದನ್ನು ನೀಡಲಾಯಿತು. ಈ ವೇಳೆ ಹುಲಿ ಸ್ಥಳದಿಂದ ಕೆಲ ದೂರು ಓಡಿ ಕುಸಿದು ಬಿದ್ದಿದೆ. ಸಂಪೂರ್ಣವಾಗಿ ಪ್ರಜ್ಞೆ ತಪ್ಪಿರುವುದನ್ನು ಖಾತರಿಪಡಿಸಿಕೊಂಡು ಹುಲಿಯನ್ನು ಸೆರೆ ಹಿಡಿಯಲಾಯಿತು.ಕೆಲವೇ ಗಂಟೆಗಳ ಅಂತರದಲ್ಲಿ ಇಬ್ಬರನ್ನು ಬಲಿ ಪಡೆದಿತ್ತು. ಇದರಿಂದ ಜನರಲ್ಲಿ ಆತಂಕ ಉಂಟಾಗಿತ್ತು. ಹುಲಿ ಪತ್ತೆ ಕಾರ್ಯಾಚರಣೆ ತಂಡದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು, ಸಿಬ್ಬಂದಿಗಳು ಪಶುವೈದ್ಯರು ಮತ್ತಿತರರು ಇದ್ದರು.