ಮಡಿಕೇರಿ: ಕೋಲಾರದ ಜಿಲ್ಲಾಧಿಕಾರಿಯಾಗಿದ್ದ ವೆಂಕಟ್ ರಾಜಾ ಅವರನ್ನು ಕೊಡಗು ಜಿಲ್ಲಾಧಿಕಾರಿಯಾಗಿ ವರ್ಗಾಯಿಸಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಸೋಮವಾರ ಆದೇಶ ಹೊರಡಿಸಿದೆ. ಈವರೆಗೂ ಕೊಡಗು ಜಿಲ್ಲಾಧಿಕಾರಿಯಾಗಿದ್ದ ಡಾ.ಬಿ.ಸಿ.ಸತೀಶ ಅವರನ್ನು ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ನ ಕಾರ್ಯಪಾಲಕ ನಿರ್ದೇಶಕರನ್ನಾಗಿ ವರ್ಗಾವಣೆಗೊಳಿಸಿದೆ.