ಮಡಿಕೇರಿ:ಅಪ್ಪಚೆಟ್ಟೋಳಂಡ 23 ನೇ ಕೊಡವ ಕೌಟುಂಬಿಕ ಹಾಕಿ ಪಂದ್ಯಾವಳಿಗೆ ನಾಪೋಕ್ಲು ಜನರಲ್ ತಿಮ್ಮಯ್ಯ ಕ್ರೀಡಾಂಗಣದಲ್ಲಿ ಮುಖ್ಯಮಂತ್ರಿ ಬೊಮ್ಮಾಯಿ ಅವರು ಚಾಲನೆ ನೀಡಿದರು.
ಕೊಡವ ಸಾಂಪ್ರದಾಯಿಕ ಉಡುಗೆ ತೊಟ್ಟು ಕೊಡವ ಭಾಷೆಯಲ್ಲಿ ಮಾತು ಪ್ರಾರಂಭಿಸಿದ ಮುಖ್ಯಮಂತ್ರಿ ನಶಿಸಿ ಹೋಗುತ್ತಿರುವ ಕುಟುಂಬಗಳ ನಡುವಿನ ಸಂಬಂಧ ಮತ್ತೆ ಬೆಸೆಯಲು ಕುಟುಂಬಗಳ ನಡುವಿನ ಹಾಕಿ
ಸಹಕಾರಿ ಎಂದರು. ಕುಟುಂಬಗಳಲ್ಲಿ ಸದಸ್ಯರ ಸಂಬಂಧ ಉತ್ತಮವಾಗಿರಬೇಕು – ಅದು ಭಾರತದ ಸಮಾಜಕ್ಕೆ ಉತ್ತಮ.
ಇದು ಭಾರತೀಯ ನಾಗರಿಕತೆ, ನಿಜವಾದ ಸಂಸ್ಕೖತಿಗೆ ಸೂಕ್ತ ಉದಾಹರಣೆ – ಕೊಡವ ಕೌಟುಂಬಿಕ ಹಾಕಿ ಇದಕ್ಕೆ ನಿದರ್ಶನ. ಹಾಕಿ ಕ್ರೀಡೆಯ ಮೂಲಕ ಕೊಡವರು ತಮ್ಮಲ್ಲಿನ ಉತ್ತಮ ಕೌಟುಂಬಿಕ ಸಂಬಂಧಗಳಿಗೆ ಮಾದರಿಯಾಗಿದ್ದಾರೆ.

ಕೊಡವ ಅಭಿವೖದ್ದಿ ನಿಗಮ ಸ್ಥಾಪನೆಗೆ ಆದೇಶ ಹೊರಡಿಸುವುದಾಗಿ ಸಿಎಂ ಘೋಷಣೆ ಮಾಡಿದರು.
ಕಾರ್ಯಕ್ರಮದಲ್ಲಿ ಸಚಿವ ಎಸ್.ಟಿ.ಸೋಮಶೇಖರ್, ಶಾಸಕರಾದ ಕೆ.ಜಿ.ಬೋಪಯ್ಯ, ಎಂ.ಪಿ. ಅಪ್ಪಚ್ಚು ರಂಜನ್, ಸುಜಾಕುಶಾಲಪ್ಪ, ಮನುಮುತ್ತಪ್ಪ, ಪದ್ಮಶ್ರೀ ಎಂ.ಪಿ.ಗಣೇಶ್, ಪದ್ಮಶ್ರೀ ರಾಣಿ ಮಾಚಯ್ಯ, ಎ.ಬಿ.ಸುಬ್ಬಯ್ಯ, ಪಾಂಡಂಡ ಬೋಪಣ್ಣ ಸೇರಿದಂತೆ ಹಲವರು ಉಪಸ್ಥಿತರಿದ್ದರು.ಏಪ್ರಿಲ್ 9 ರವರೆಗೆ ನಾಪೋಕ್ಲುವಿನಲ್ಲಿ ನಡೆಯುವ ಕೊಡವ ಕೌಟುಂಬಿಕ ಹಾಕಿಯಲ್ಲಿ 336 ಕುಟುಂಬ ತಂಡಗಳು ಪಾಲ್ಗೊಳ್ಳಲಿದೆ.