ಸುಳ್ಯ:ಅರೆಭಾಷೆಗೆ ಒಂದು ಸಾಂಸ್ಕೃತಿಕ ನೆಲೆಗಟ್ಟನ್ನು ಹಾಕಿ ಕೊಟ್ಟು ವ್ಯಾಕರಣದ ಶಿಸ್ತನ್ನು ರೂಢಿಸಿದವರು ಭಾಷಾ ವಿಜ್ಞಾನಿ ಕೋಡಿ ಕುಶಾಲಪ್ಪ ಗೌಡರು ಎಂದು ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ಸದಾನಂದ ಮಾವಜಿ ಹೇಳಿದರು.ಅವರು ಅರೆಭಾಷೆ ಅಕಾಡೆಮಿ ವತಿಯಿಂದ ದಕ್ಷಿಣ ಕನ್ನಡ ಗೌಡ ವಿದ್ಯಾ ಸಂಘ, ಹಾಗೂ
ಶ್ರೀ ಶಾರದಾ ಪದವಿ ಪೂರ್ವ ಕಾಲೇಜು ಸುಳ್ಯ ಇದರ ಸಹಯೋಗದಲ್ಲಿ ನಡೆದ ಭಾಷಾ ವಿಜ್ಞಾನಿ ಡಾ.ಕೋಡಿ ಕುಶಾಲಪ್ಪ ಗೌಡರ ‘ನೆಂಪುನ’ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಅರೆಭಾಷೆಯನ್ನು ಆಡುಭಾಷೆ ಎಂದು ಪರಿಗಣಿಸದೆ,ಅದರ ಭಾಷಿಕ ಸ್ವರೂಪ ಹಾಗೂ

ವೈಶಿಷ್ಠ್ಯಗಳನ್ನು ವೈಜ್ಞಾನಿಕವಾಗಿ ಅಧ್ಯಯನ ಮಾಡಬೇಕೆಂಬ ದೃಷ್ಟಿಕೋನವನ್ನು ಬೆಳೆಸಿದವರಲ್ಲಿ ಕೋಡಿಯವರು ಪ್ರಮುಖರು.ಕನ್ನಡದ ಸಹೋದರ ಭಾಷೆಗಳನ್ನು ಉಳಿಸಿ ಬೆಳೆಸುವ ಕರ್ತವ್ಯ ನಮ್ಮದು ಎಂದು ಹೇಳಿದರು.
ಕಾರ್ಯಕ್ರವನ್ನು ಉದ್ಘಾಟಿಸಿದ ದಕ್ಷಿಣ ಕನ್ನಡ ಗೌಡ ವಿದ್ಯಾ ಸಂಘದ ಅಧ್ಯಕ್ಷರಾದ ಧನಂಜಯ ಅಡ್ಪಂಗಾಯ ಮಾತನಾಡಿ ಸಂಸ್ಕೃತಿ ಮತ್ತು ಸಂಸ್ಕಾರವು ಉತ್ತಮ ಸಹಜೀವನ ಮತ್ತು ಸಹಬಾಳ್ವೆ ಹಾಗೂ ಅಭಿವೃದ್ಧಿಯ ಮೂಲ ಎಂದು ಹೇಳಿದರು. ಈ ನಿಟ್ಟಿನಲ್ಲಿ ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ಕೆಲಸವನ್ನು ಅರೆಭಾಷೆ ಅಕಾಡೆಮಿಯು ಮಾಡುತ್ತಿರುವುದು ಶ್ಲಾಘನೀಯ ಎಂದು ಹೇಳಿದರು.
ಶಾರದಾ ಕಾಲೇಜಿನ ನಿವೃತ್ತ ಉಪನ್ಯಾಸಕ ಪ್ರಸನ್ನ ನಿಡ್ಯಮಲೆ, ಕಾಲೇಜಿನ ಪ್ರಾಂಶುಪಾಲೆ ಸ್ವರ್ಣಕಲಾ ಮಾತನಾಡಿದರು. ಸಾಹಿತಿ ಸಂಜೀವ ಕುದ್ಪಾಜೆ, ನಿವೃತ್ತ ಉಪನ್ಯಾಸಕ ಡಾ.ಎನ್.ವಿ. ಕರುಣಾಕರ ಉಪನ್ಯಾಸ ನೀಡಿದರು.
ಕಾರ್ಯಕ್ರಮದ ಸದಸ್ಯ ಸಂಚಾಲಕ ಗೋಪಾಲ ಪೆರಾಜೆ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಅಕಾಡೆಮಿಯ ಸದಸ್ಯೆ ಚಂದ್ರಾವತಿ ಬಡ್ಡಡ್ಕ ವಂದಿಸಿದರು.ಸದಸ್ಯರಾದ ಚಂದ್ರಶೇಖರ ಪೇರಾಲು, ಡಾ. ಎನ್.ಎ. ಜ್ಞಾನೇಶ್ ಇವರುಗಳು ವೇದಿಕೆಯಲ್ಲಿ ಉಪಸ್ಥಿತರಿದ್ದರು.ಪತ್ರಕರ್ತೆ ಪೂಜಾಶ್ರೀ ವಿತೇಶ್ ಕೋಡಿ ಇವರು ಕಾರ್ಯಕ್ರಮ ನಿರೂಪಿಸಿದರು.










