ಕೊಡಿಯಾಲ: ನಮ್ಮೂರ ನಮ್ಮ ಕನಸು ಜನಸೇವಾ ಟ್ರಸ್ಟ್ ಕಲ್ಪಡ ಕೊಡಿಯಾಲ ಇದರ ಆಶ್ರಯದಲ್ಲಿ ಸುಳ್ಯ ತಾಲೂಕು ಅಮೆಚೂರು ಕಬಡ್ಡಿ ಅಸೋಸೀಯೇಶನ್ ಇವರ ಸಹಭಾಗಿತ್ವದಲ್ಲಿ ಪುರುಷರ 62 ಕೆ.ಜಿ ಮುಕ್ತ ಮ್ಯಾಟ್ ಕಬಡ್ಡಿ ಪಂದ್ಯಾಟ ಮತ್ತು ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರಿಗೆ ಸನ್ಮಾನ ಹಾಗೂ ಅಭಿನಂದನಾ ಕಾರ್ಯಕ್ರಮ ಡಿ. 31 ರಂದು ಕೊಡಿಯಾಲ ಮೂವಪ್ಪೆ ಪ್ರಾಥಮಿಕ ಶಾಲಾ ಕ್ರೀಡಾಂಗಣದಲ್ಲಿ ನಡೆಯಿತು.
ಸಮಾರೋಪ ಸಮಾರಂಭವನ್ನು ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಉದ್ಘಾಟಿಸಿ ಶುಭ ಹಾರೈಸಿದರು. ಅಧ್ಯಕ್ಷತೆಯನ್ನು
ನಮ್ಮೂರ ನಮ್ಮ ಕನಸು ಜನಸೇವಾ ಟ್ರಸ್ಟ್ ಅಧ್ಯಕ್ಷ ಸುಬ್ರಹ್ಮಣ್ಯ ಕೆ.ಎಂ. ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಪದ್ಮಶ್ರೀ ಪುರಸ್ಕೃತ ಗಿರೀಶ್ ಭಾರಧ್ವಾಜ್, ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಶಿಕ್ಷಕ ಕೆ.ಆರ್.ಗಂಗಾಧರ, ಕೊಡಿಯಾಲ ಗ್ರಾ.ಪಂ. ಅದ್ಯಕ್ಷ ಹರ್ಷನ್ ಕೆ.ಟಿ, ಕೊಡಿಯಾಲ ಗ್ರಾ,ಪಂ. ಪಿಡಿಒ ಪ್ರವೀಣ್ ಕುಮಾರ್, ಪುಣ್ಚತ್ತಾರು ಶ್ರೀಹರಿ ಫ್ರೆಂಡ್ಸ್ ಸ್ಪೊರ್ಟ್ಸ್ ಕ್ಲಬ್ ಅಧ್ಯಕ್ಷ ಹರೀಶ್ ಪೈಕ, ಶಿಕ್ಷಕಿ ನಿರ್ಮಲ ಕೆ.ಎನ್, ಭಾಗವಹಿಸಿದ್ದರು.
ಸಮಾರಂಭದಲ್ಲಿ ಸುಬ್ರಹ್ಮಣ್ಯ ಕೆಎಸ್ಎಸ್ ಕಾಲೇಜಿನ ನಿವೃತ್ತ ದೈಹಿಕ ಶಿಕ್ಷಣ ನಿರ್ದೇಶಕ ತುಕರಾಮ್ ಏನೆಕಲ್ಲು, ಕಾಣಿಯೂರು ಪ್ರಗತಿ ವಿದ್ಯಾಸಂಸ್ಥೆಯ ಸಂಚಾಲಕ ಜಯಸೂರ್ಯ ರೈ ಮಾದೋಡಿ ಅವರಿಗೆ ಜೀವಮಾನ ಸಾಧನಾ ಪ್ರಶಸ್ತಿ ‘ನಮ್ಮರಿನ ರತ್ನ’ ನೀಡಿ ಸನ್ಮಾನಿಸಲಾಯಿತು.
ವಿವಿಧ ಕ್ಷೇತ್ರದ ಸಾಧಕರನ್ನು ಸನ್ಮಾನಿಸಲಾಯಿತು. ಸಾಧಕರ ಸನ್ಮಾನ, ಪ್ರತಿಭಾ ಪುರಸ್ಕಾರ ನಡೆಯಿತು.

ಉದ್ಘಾಟನಾ ಕಾರ್ಯಕ್ರಮ:
ಸುಳ್ಯ ತಾಲೂಕು ಅಮೆಚೂರ್ ಕಬಡ್ಡಿ ಎಸೋಸಿಯೇಷನ್ ಅಧ್ಯಕ್ಷ ಮಾಧವ ಬಿ.ಕೆ. ಪಂದ್ಯಾ ಕೂಟವನ್ನು ಉದ್ಘಟಿಸಿದರು.
ನಮ್ಮೂರ ನಮ್ಮ ಕನಸು ಜನಸೇವಾ ಟ್ರಸ್ಟ್ ನ ಅಧ್ಯಕ್ಷ ಸುಬ್ರಹ್ಮಣ್ಯ ಕೆ.ಎಂ.ಅಧ್ಯಕ್ಷತೆ ವಹಿಸಿದ್ದರು.
ವೇದಿಕೆಯಲ್ಲಿ ಬೆಳ್ಳಾರೆ ಡಿ.ಸಿ.ಸಿ.ಬ್ಯಾಂಕ್ ಶಾಖಾ ವ್ಯವಸ್ಥಾಪಕ ಸಂತೋಷ್ ಕುಮಾರ್ ಮರಕ್ಕಡ, ಬೆಳ್ಳಾರೆ ಪ್ರಾ.ಕೃ.ಪ.ಸಹಕಾರಿ ಸಂಘದ ಮಾಜಿ ಅಧ್ಯಕ್ಷ ಅನಿಲ್ ರೈ ಚಾವಡಿಬಾಗಿಲು, ಸುಳ್ಯ ತಾಲೂಕು ಕ್ರೀಡಾಭಾರತಿ ಅಧ್ಯಕ್ಷ ಎ.ಸಿ.ವಸಂತ್, ಗ್ರಾಮ ಪಂಚಾಯತ್ ಅಧ್ಯಕ್ಷ ಹಾಗೂ ನಮ್ಮೂರ ನಮ್ಮ ಕನಸು ಜನಸೇವಾ ಟ್ರಸ್ಟ್ ಕಾರ್ಯದರ್ಶಿ ಹರ್ಷನ್ ಕೆ.ಟಿ,

ಉಪಾಧ್ಯಕ್ಷೆ ಚಿತ್ರಾ ದಿನೇಶ್, ಮೂವಪ್ಪೆ ಶಾಲಾ ಶಿಕ್ಷಕಿ ಕಾಣಿಯೂರು ಫ್ರೆಂಡ್ಸ್ ಕ್ಲಬ್ ಅಧ್ಯಕ್ಷ ಕಿರಣ್ ಮಲೆಕೆರ್ಚಿ, ಶಾಲಾ ಶಿಕ್ಷಕಿ ಪುಷ್ಪಾ, ಕಾಣಿಯೂರು ಸ.ಹಿ.ಪ್ರಾ.ಶಾಲಾ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಪದ್ಮಯ್ಯ ಗೌಡ ಅನಿಲ, ಬೆಳ್ಳಾರೆ ಸಹಕಾರಿ ಬ್ಯಾಂಕ್ ನಿರ್ದೇಶಕ ಸುಂದರ ಗೌಡ ಪೋಳಾಜೆ,ಪದ್ಮಯ್ಯ ಗೌಡ ತೋಟ ಕಲ್ಪಡ,ಮೂವಪ್ಪೆ ಶಾಲಾ ಎಸ್.ಡಿ.ಎಂ.ಸಿ.ಅಧ್ಯಕ್ಷ ಲಕ್ಷ್ಮಣ ಕಣಿಲೆಗುಂಡಿ ಉಪಸ್ಥಿತರಿದ್ದರು. ಪುಷ್ಪಾ ಪ್ರಾರ್ಥಿಸಿ, ನಮ್ಮೂರ ನಮ್ಮ ಕನಸು ಜನಸೇವಾ ಟ್ರಸ್ಟ್ ನ ಅಧ್ಯಕ್ಷ ಸುಬ್ರಹ್ಮಣ್ಯ ಕೆ.ಎಂ.ಸ್ವಾಗತಿಸಿ, ಗಣೇಶ ನಡುವಾಲ್ ಕಾರ್ಯಕ್ರಮ ನಿರೂಪಿಸಿ, ಶೇಖರ ಕೆ.ಪಿ.ವಂದಿಸಿದರು.
ಟ್ರಸ್ಟ್ ನ ಕೋಶಾಧಿಕಾರಿ ಜಯಂತ್ ಕಾಯರ್ತಡ್ಕ, ಉಪಾಧ್ಯಕ್ಷ ಕೊರಗಪ್ಪ ಕೆ.ಕೆ,ಜೊತೆ ಕೋಶಾಧಿಕಾರಿ ಭಾಸ್ಕರ ತೋಟ,ಜೊತೆ ಕಾರ್ಯದರ್ಶಿ ಗಣೇಶ್ ಪೆರ್ಲೋಡಿ ಹಾಗೂ ಸರ್ವಸದಸ್ಯರು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು.









